ಶೀಘ್ರದಲ್ಲೇ ಸಿದ್ದರಾಮಯ್ಯ ರಾಜೀನಾಮೆ: ನಳಿನ್

ಮಸ್ಕಿ: ಬಿಜೆಪಿ ಗೆಲ್ಲುವ ಪಕ್ಷವಾಗಿದೆ. ಕಾಂಗ್ರೆಸ್ ಸೋಲಿನ ಪಕ್ಷವಾಗಿದೆ. ಸಿದ್ದರಾಮಯ್ಯ ಈ ಹಿಂದೆ ಗುರುವಿಗೆ ತಿರುಮಂತ್ರ ಹಾಕಿ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದ್ದರು. ಇದೀಗ ಕಾಂಗ್ರೆಸ್ ನಲ್ಲಿ ತನ್ನ ಅಸ್ವಿತ್ವ ಕಳೆದುಕೊಳ್ಳುತ್ತಿದ್ದು, ತಿಂಗಳೊಳಗೆ ಪಕ್ಷ ಬಿಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದ್ದಾರೆ. ಮಸ್ಕಿಯಲ್ಲಿ ಬಿಜೆಪಿಯಿಂದ ಹಮ್ಮಿಕೊಂಡಿದ್ದ ಬೃಹತ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದರು. ಕಾಂಗ್ರೆಸ್ ನಲ್ಲಿ ಒಳಜಗಲ ಭುಗಿಲೆದಿದ್ದು, ಎಲ್ಲಿಯೂ ಸಲ್ಲದ ಸಿದ್ದರಾಮಯ್ಯ ಶೀಘ್ರದಲ್ಲೇ ಪಕ್ಷಕ್ಕೆ ರಾಜೀನಾಮೆ ನೀಡಲಿದ್ದಾರೆಂದು ಭವಿಷ್ಯ ನುಡಿದರು.