ಲೋಕಸಭೆ ಚುನಾವಣೆ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ: ಯಡಿಯೂರಪ್ಪ ಭವಿಷ್ಯ
ಬೆಂಗಳೂರು: ಲೋಕಸಭೆ ಚುನಾವಣೆ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಾದಿ ಅಂತ್ಯವಾಗಲಿದೆ ಎಂದು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಮಂಗಳವಾರ ಭವಿಷ್ಯ ನುಡಿದಿದ್ದಾರೆ. ಅರಮನೆ ಮೈದಾನದಲ್ಲಿ ನಡೆದ ಶಕ್ತಿಕೇಂದ್ರ ಪ್ರಮುಖರ ಸಭೆಯಲ್ಲಿ ಯಡಿಯೂರಪ್ಪ ಅವರು ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಅವರಿಗೆ 60,000 ಮತಗಳ ಮುನ್ನಡೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ತಮ್ಮ ತವರು ಕ್ಷೇತ್ರ ವರುಣಾದಲ್ಲಿ ಮತದಾರರಿಗೆ ಕರೆ ನೀಡಿದ್ದನ್ನು ಉಲ್ಲೇಖಿಸಿ ಮಾತನಾಡಿದರು. ಸಿದ್ದರಾಮಯ್ಯನವರು ತಮ್ಮ ಸಮಯ […]
ಕಾಂಗ್ರೆಸ್ ಗ್ಯಾರಂಟಿ ಮುಂದಿನ ಸಂಪುಟ ಸಭೆಯ ನಂತರ ಜಾರಿ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮುಖ್ಯಮಂತಿ ಸಿದ್ದರಾಮಯ್ಯನವರ ಪ್ರಮಾಣ ವಚನ ಸ್ವೀಕಾರ ಸಮಯದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾವು ನಿಮಗೆ 5 ಭರವಸೆಗಳನ್ನು ನೀಡಿದ್ದೇವೆ. ನಾವು ಸುಳ್ಳು ಭರವಸೆ ನೀಡುವುದಿಲ್ಲ ಎಂದು ಹೇಳಿದ್ದೆ. ನಾವು ಹೇಳಿದ್ದನ್ನು ಮಾಡುತ್ತೇವೆ. 1-2 ಗಂಟೆಗಳಲ್ಲಿ ಕರ್ನಾಟಕ ಸರ್ಕಾರದ ಮೊದಲ ಸಂಪುಟ ಸಭೆ ನಡೆಯಲಿದ್ದು, ಆ ಸಭೆಯಲ್ಲಿ ಈ 5 ಭರವಸೆಗಳು ಕಾನೂನಾಗಲಿವೆ ಎಂದಿದ್ದರು. #WATCH | We made 5 promises to you. I had said we don't make […]
ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಿದ್ದರಾಮಯ್ಯ
ಬೆಂಗಳೂರು: ಶ್ರೀಕಂಠೀರವ ಕ್ರೀಡಾಂಗಣದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಜಿ ಪರಮೇಶ್ವರ, ಕೆ ಎಚ್ ಮುನಿಯಪ್ಪ, ಕೆ ಜೆ ಜಾರ್ಜ್, ಎಂ ಬಿ ಪಾಟೀಲ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾ ರೆಡ್ಡಿ, ಜಮೀರ್ ಅಹಮದ್ ಖಾನ್ ಸೇರಿದಂತೆ ಕಾಂಗ್ರೆಸ್ ಶಾಸಕರು ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, […]
ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರದಂದೇ 28 ಶಾಸಕರು ಸಚಿವರಾಗಿ ಪದಗ್ರಹಣ ಸಾಧ್ಯತೆ ?
ಬೆಂಗಳೂರು: ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ, ಡಿ.ಕೆ.ಶಿವಕುಮಾರ್ ಅವರನ್ನು ಉಪಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಹೈಕಮಾಂಡ್ ಘೋಷಣೆ ಮಾಡಿದ್ದು, ನಾಳೆ (ಮೇ 20) ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪದಗ್ರಹಣ ಸಮಾರಂಭ ನಡೆಯಲಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಜೊತೆಗೆ ಕೆಲವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ. ಸಿಎಂ ಆಯ್ಕೆ ಸರ್ಕಸ್ ಬಳಿಕ ಕೈ ಪಾಳಯದಲ್ಲಿ ಸಚಿವ ಸಂಪುಟ ಕಸರತ್ತು ಶುರುವಾಗಿದ್ದು, ಹಲವು ಶಾಸಕರು ನೂತನ ಸಚಿವ ಸಂಪುಟ ಸೇರುವ ಆಶಯ ವ್ಯಕ್ತಪಡಿಸಿದ್ದಾರೆ. ಎಲ್ಲರೂ ತಮ್ಮ ಜಿಲ್ಲೆ, ತಮ್ಮ ಜಾತಿಗೆ ಹೆಚ್ಚು ಸಚಿವ […]
ನಾಳೆ ಮುಖ್ಯಮಂತ್ರಿ ಪದಗ್ರಹಣ: ಸಮಾನ ಮನಸ್ಕ ವಿರೋಧ ಪಕ್ಷಗಳ ನಾಯಕರಿಗೆ ಆಹ್ವಾನ
ನವದೆಹಲಿ: ಮೇ 20 ರಂದು ನಡೆಯಲಿರುವ ಕರ್ನಾಟಕದ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸಮಾನ ಮನಸ್ಕ ಪಕ್ಷಗಳ ನಾಯಕರನ್ನು ಕಾಂಗ್ರೆಸ್ ಆಹ್ವಾನಿಸಿದೆ ಎಂದು ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ, ಮಹಾರಾಷ್ಟ್ರ ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರಿಗೂ ಪ್ರಮಾಣವಚನ ಸಮಾರಂಭಕ್ಕೆ ಆಹ್ವಾನ ನೀಡಲಾಗಿದೆ. ಹೇಮಂತ್ […]