ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೂ ಕೊರೊನಾ ಪಾಸಿಟಿವ್: ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೂ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಿದ್ದರಾಮಯ್ಯನವರಿಗೆ ಮೊದಲು ಜ್ವರ ಕಾಣಿಸಿಕೊಂಡಿದ್ದು, ಜ್ವರ ತೀವ್ರಗೊಂಡಾಗ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅವರಿಗೆ ಆಸ್ಪತ್ರೆಯಲ್ಲಿ ಕೊರೊನಾ ಪರೀಕ್ಷೆ ಗೆ ಒಳಪಡಿಸಲಾಗಿದ್ದು, ಆಗ ಕೊರೊನಾ ಇರುವುದು ದೃಢಪಟ್ಟಿದೆ. ಸಿದ್ದರಾಮಯ್ಯನವರು ತನಗೆ ಕೊರೊನಾ ಬಂದಿರುವ ಬಗ್ಗೆ ಸ್ವತಃ ಟ್ವೀಟ್ ಮಾಡಿ ತಿಳಿಸಿದ್ದಾರೆ. ತನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಕೊರೊನಾ ಟೆಸ್ಟ್ ಮಾಡಿಕೊಳ್ಳುವಂತೆ ವಿನಂತಿ ಮಾಡಿದ್ದಾರೆ.