ಡಿಕೆಶಿ ವಿಚಾರಣೆ ಬಿಜೆಪಿಯ ದ್ವೇಷ ರಾಜಕಾರಣ: ಸಿದ್ದರಾಮಯ್ಯ

ಮಂಗಳೂರು: ಇ.ಡಿ. ಅಧಿಕಾರಿಗಳಿಂದ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರ ವಿಚಾರಣೆ ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ‌ ತಿಳಿಸಿದ್ದಾರೆ. ಶನಿವಾರ ದ.ಕ.‌ಜಿಲ್ಲೆಗೆ ಆಗಮಿಸಿದ ಅವರು ಮಂಗಳೂರಿನಲ್ಲಿ ಮಾಧ್ಯಮದ ಮಾತನಾಡಿದರು. ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ. ಇದರ ವಿರುದ್ಧ ನಾವು ಕಾನೂನು ಹೋರಾಟ ಮಾಡುತ್ತೇವೆ ಎಂದು ಅವರು ತಿಳಿಸಿದ್ದಾರೆ.