ಮಂಗಳೂರು: ಎಸ್.ಎಂ ಕೃಷ್ಣರ ಅಳಿಯ ಸಿದ್ಧಾರ್ಥ ನಾಪತ್ತೆ? ಆತ್ಮಹತ್ಯೆ ಶಂಕೆ..!

ಮಂಗಳೂರು: ಮಾಜಿ ಮುಖ್ಯ ಮಂತ್ರಿ, ಹಿರಿಯ ರಾಜಕರಣಿ ಎಸ್. ಎಂ. ಕೃಷ್ಣ ಅವರ ಅಳಿಯ, ಉದ್ಯಮಿ ಸಿದ್ಧಾರ್ಥ ಅವರು ಸೋಮವಾರ ಸಂಜೆಯಿಂದ ನಾಪತ್ತೆಯಾಗಿದ್ದಾರೆ. ಮಂಗಳೂರು ಹೊರವಲಯದ ನೇತ್ರಾವತಿ ಸೇತುವೆಯಿಂದ ತಡ ರಾತ್ರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ? ಎಂದು ಶಂಕಿಸಲಾಗಿದೆ. ಇನೋವ ಕಾರಿನಲ್ಲಿ ತಮ್ಮ ಚಾಲಕನೊಂದಿಗೆ ಬಂದಿದ್ದ ಸಿದ್ಧಾರ್ಥ ಅವರು ಸೇತುವೆ ಸಮೀಪ ಕಾರು ನಿಲ್ಲಿಸಿ ವಾಕಿಂಗ್ ಮಾಡುತ್ತೇನೆ ಎಂದು ಇಳಿದು ಹೋಗಿ ನದಿಗೆ ಹಾರಿದ್ದಾರೆ ಎನ್ನಲಾಗುತ್ತಿದೆ.‌ ಆದರೆ ಈ ಬಗ್ಗೆ ಯಾವುದೇ ಮಾಹಿತಿ ಖಚಿತವಾಗಿಲ್ಲ. ಸೇತುವೆಯಲ್ಲಿ […]