ಸಿಡಿಲು ಆ್ಯಪ್ ನಿಂದ ದೊರೆಯಲಿದೆ ಸಿಡಿಲಿನ ಮುನ್ಸೂಚನೆ: ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ವಿನೂತನ ತಂತ್ರಜ್ಞಾನ

ಉಡುಪಿ: ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸಿಡಿಲಿನಿಂದ ರಕ್ಷಣೆ ಪಡೆಯಬಹುದಾದ ಸರಳ ಮಾರ್ಗಗಳನ್ನು ತಿಳಿಸಿದೆ. ಸಿಡಿಲು-ಮೊಬೈಲ್‌ ಆ್ಯಪ್ ನಲ್ಲಿ ಸಿಡಿಲಿನ ಬಗ್ಗೆ ಮುಂಚಿತವಾಗಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ. ಸಿಡಿಲಿನ ಸಂಭವನೀಯತೆ ಇದ್ದಲ್ಲಿ ಹೊರಗಿನ ಕೆಲಸಗಳನ್ನು ಮುಂದೂಡಿ, ಆದಷ್ಟು ಮನೆಯಲ್ಲಿಯೇ ಇರುವುದು ಸೂಕ್ತ. ಮನೆಯ ಸುತ್ತಲಿನಲ್ಲಿರುವ ಕೊಳೆತ ಹಾಗೂ ಒಣಗಿದ ಮರಗಳನ್ನು ತೆರವುಗೊಳಿಸಬೇಕು. ಮನೆಯ ಒಳಗಿರುವಾಗ ಕಿಟಕಿಯಿಂದ ದೂರವಿರಬೇಕು, ಈ ಸಂದರ್ಭದಲ್ಲಿ ದೂರವಾಣಿ, ಮೊಬೈಲ್ ಮತ್ತುಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸಬಾರದು. ಗೃಹಪಯೋಗಿ ಉಪಕರಣಗಳ ಪ್ಲಗ್‌ಗಳನ್ನು ತೆಗೆದಿಡಬೇಕು. ಗೋಡೆಯಿಂದ ದೂರವಿರುವುದು ಉತ್ತಮ. […]