ಮತದಾನ ಜಾಗೃತಿ ಕಾರ್ಯಕ್ರಮಗಳ ವೇಳಾಪಟ್ಟಿ ತಯಾರಿಸಿ: ಸಿಂಧೂ ಬಿ ರೂಪೇಶ್ ಸೂಚನೆ
ಉಡುಪಿ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮತದಾನದ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಳ್ಳುವಾಗ ಎಲ್ಲಾ ಇಲಾಖೆಯವರು ತಾವು ಮುಂದಿನ ದಿನಗಳಲ್ಲಿ ನಡೆಸುವ ಕಾರ್ಯಕ್ರಮದ ವೇಳಾಪಟ್ಟಿಯ ತಯಾರಿಸಿ ಗುರುವಾರ ಸ್ವೀಪ್ ಸಮಿತಿಗೆ ನೀಡುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷೆ ಸಿಂಧೂ ಬಿ. ರೂಪೇಶ್ ಹೇಳಿದರು. ಅವರು ಬುಧವಾರ ಜಿಲ್ಲಾ ಪಂಚಾಯತ್‍ನಲ್ಲಿ ನಡೆದ ಮುಂಬರುವ ಲೋಕ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಸ್ವೀಪ್ ಸಮಿತಿಯ ವತಿಯಿಂದ ಕೈಗೊಳ್ಳಬೇಕಾದ ಮತದಾನ ಜಾಗೃತಿ ಕಾರ್ಯಕ್ರಮದ ಅನುಷ್ಟಾನ ಕುರಿತ ಸಭೆಯಲ್ಲಿ […]