ಸಾರ್ವಜನಿಕರಿಗೆ ಸರಿಯಾಗಿ ಲಭಿಸದ ಆಧಾರ್; ಜಿ.ಪಂ. ಸಾಮಾನ್ಯ ಸಭೆಯಲ್ಲಿ ಸದಸ್ಯರ ಆಕ್ರೋಶ
ಉಡುಪಿ, ಜೂ.25: ಆಧಾರ್ ಕಾರ್ಡ್ ಸೇವೆ ಸಾರ್ವಜನಿಕರಿಗೆ ಸರಿಯಾಗಿ ಸಿಗದೇ ತೀವ್ರ ಸಮಸ್ಯೆ ಉಂಟಾಗಿದೆ ಎಂದು ಜಿ.ಪಂ. ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಜಿ.ಪಂ.ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಜಿ.ಪಂ ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆಯಲ್ಲಿ ನಡೆದ 16ನೇ ಜಿಲ್ಲಾ ಪಂ. ಸಾಮಾನ್ಯ ಸಭೆಯಲ್ಲಿ ಆಧಾರ್‌ಕಾರ್ಡ್ ಸಮಸ್ಯೆ ಕುರಿತು ಚರ್ಚೆ ನಡೆಯಿತು. ಜಿಲ್ಲೆಯ ಎಲ್ಲಾ ಗ್ರಾ.ಪಂ.ಗಳಲ್ಲಿ ಸಾಫ್ಟವೇರ್ ಸಮಸ್ಯೆ ಉಂಟಾಗಿದೆ ಎನ್ನುವ ಕಾರಣ ನೀಡಿದ್ದು, ಆಧಾರ್ ಸೇವೆ ಸ್ಥಗಿತಗೊಂಡಿದೆ. ತಾಲೂಕು ಕಚೇರಿ, ಅಂಚೆ ಕಚೇರಿಯಲ್ಲಿಯೂ ಸರಿಯಾದ ಸೇವೆ […]
ಎಸ್.ಎಸ್.ಎಲ್.ಸಿ ಯಲ್ಲಿ ಜಿಲ್ಲೆ ಪ್ರಥಮ ಸ್ಥಾನ ಪಡೆಯಲು ಯೋಜನೆ ರೂಪಿಸಿ: ದಿನಕರ ಬಾಬು
ಉಡುಪಿ, ಜೂನ್ 15: ಈ ಬಾರಿಯ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಜಿಲ್ಲೆ ರಾಜ್ಯದಲ್ಲಿ 5 ನೇ ಸ್ಥಾನ ಪಡೆದಿದ್ದು, ಮುಂದಿನ ಬಾರಿ ಜಿಲ್ಲೆ ಪ್ರಥಮ ಸ್ಥಾನ ಪಡೆಯುವ ನಿಟ್ಟಿನಲ್ಲಿ, ಈಗಿನಿಂದಲೇ ಯೋಜನೆ ರೂಪಿಸಿ, ಕಾರ್ಯೋನ್ಮುಖರಾಗುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಸೂಚಿಸಿದ್ದಾರೆ. ಅವರು ಶನಿವಾರ, ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆ ಪ್ರಥಮ ಸ್ಥಾನ ಪಡೆಯಲು ಯೋಜನೆ ರೂಪಿಸುವಂತೆ ಸೂಚಿಸಿದ ಅಧ್ಯಕ್ಷ […]
ಶಂಕರಾಚಾರ್ಯರಿಂದ ಹಿಂದೂ ಧರ್ಮ ರಕ್ಷಣೆ: ಸಿಂಧೂ ಬಿ ರೂಪೇಶ್
ಉಡುಪಿ, ಮೇ 9: 8 ನೇ ಶತಮಾನದಲ್ಲಿ ಹಲವು ಧರ್ಮಗಳ ಸವಾಲಿನ ನಡುವೆ ಹಿಂದೂ ಧರ್ಮವನ್ನು ರಕ್ಷಿಸುವಲ್ಲಿ ಶಂಕರಾಚಾರ್ಯರು ಮಹತ್ವದ ಕಾರ್ಯಗಳ ಮೂಲಕ ಹಿಂದೂ ಧರ್ಮ ರಕ್ಷಿಸಿದ್ದರು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸಿಂಧೂ ಬಿ ರೂಪೇಶ್ ಹೇಳಿದರು. ಅವರು ಗುರುವಾರ, ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ನಡೆದ ಶ್ರೀ ಶಂಕರಾಚಾರ್ಯ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅದ್ವೈತ ಧರ್ಮ ಪ್ರತಿಪಾದಿಸಿದ ಶಂಕರಚಾರ್ಯರು […]
ಕುಡಿಯುವ ನೀರಿನ ಸಮಸ್ಯೆ: ಗ್ರಾ.ಪಂ ಗಳಿಗೆ ನೋಡೆಲ್ ಅಧಿಕಾರಿಗಳ ನೇಮಕ
ಉಡುಪಿ, ಮೇ 9: ಉಡುಪಿ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಸಮರ್ಪಕವಾಗಿ ನಿರ್ವಹಿಸಲು ಪ್ರತೀ ಗ್ರಾಮ ಪಂಚಾಯತ್‍ಗಳಿಗೆ ನೋಡೆಲ್ ಅಧಿಕಾರಿಗಳನ್ನು ನೇಮಿಸಲಾಗುವುದು ಎಂದು ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿಂಧು ಬಿ ರೂಪೇಶ್. ಹೇಳಿದ್ದಾರೆ. ಅವರು ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯ ಕುಡಿಯುವ ನೀರಿನ ಪರಿಸ್ಥಿತಿ ಕುರಿತು ಸಂಬಂಧಪಟ್ಟ ಇಂಜಿನಿಯರ್‍ಗಳ ಸಭೆ ನಡೆಸಿ ಮಾತನಾಡಿದರು. ಕುಡಿಯುವ ನೀರಿನ ವ್ಯವಸ್ಥಿತ ನಿರ್ವಹಣೆ, ಟ್ಯಾಂಕರ್ ಮೂಲಕ ನೀರು ಸರಬರಾಜು ಸೇರಿದಂತೆ ಪ್ರತೀ ಗ್ರಾಮ ಪಂಚಾಯತ್‍ನಲ್ಲಿ ಸಾರ್ವಜನಿಕರಿಗೆ ಕುಡಿಯುವ […]