ಮಲೇರಿಯಾ ನಿಯಂತ್ರಣಕ್ಕೆ ಜನರ ಸಹಭಾಗಿತ್ವ ಅಗತ್ಯ: ಸಿಂಧೂ ರೂಪೇಶ್

ಉಡುಪಿ, ಜೂನ್ 27: ಉಡುಪಿ ಜಿಲ್ಲೆಯಲ್ಲಿ ಇದೀಗ ಮಲೇರಿಯಾವು ನಿಯಂತ್ರಣದಲ್ಲಿದ್ದು, ಮಲೇರಿಯಾ ನಿರ್ಮೂಲನೆ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಜನರ ಸಹಕಾರ ಅಗತ್ಯ ಎಂದು ಜಿಲ್ಲಾ ಪಂಚಾಯತ್‍ನ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಸಿಂಧೂ ರೂಪೇಶ್ ಹೇಳಿದ್ದಾರೆ. ಅವರು ಗುರುವಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,  ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಚೇರಿ ಹಾಗೂ ಉಡುಪಿ ನಗರಸಭೆ ಸಹಯೋಗದಲ್ಲಿ  ಹಮ್ಮಿಕೊಂಡಿದ್ದ, ಮಲೇರಿಯಾ ವಿರೋಧಿ ಮಾಸಾಚರಣೆ  ಪ್ರಯುಕ್ತ  , ಬೋರ್ಡ್ ಹೈಸ್ಕೂಲ್ ಆರವಣದಲ್ಲಿ ಏರ್ಪಡಿಸಿದ್ದ  […]