ಭಾರತೀಯ ಮೂಲದ ಥರ್ಮನ್ ಷಣ್ಮುಗರತ್ನಂ ಸಿಂಗಾಪುರದ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ
ಸಿಂಗಾಪುರ: ಇದೇ ಸೆಪ್ಟೆಂಬರ್ 13ರೊಳಗೆ ನಡೆಯುವ ಅಧ್ಯಕ್ಷೀಯ ಚುನಾವಣೆಯಲ್ಲಿ ಸಿಂಗಾಪುರದ ಹಿರಿಯ ಸಚಿವರಾಗಿರುವ ಥರ್ಮನ್ ಷಣ್ಮುಗರತ್ನಂ ಅವರು ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಇವರು ಯಾರು? ಹಿನ್ನೆಲೆ ಏನು? ಸಂಪೂರ್ಣ ಮಾಹಿತಿ ಇಲ್ಲಿದೆಸಿಂಗಾಪುರದ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಭಾರತೀಯ ಮೂಲದ ಹಿರಿಯ ಸಚಿವ ಥರ್ಮನ್ ಷಣ್ಮುಗರತ್ನಂ ಅವರು ತಮ್ಮ ಇಂಗಿತವನ್ನು ಗುರುವಾರ ಪ್ರಕಟಿಸಿದ್ದಾರೆ. 22 ವರ್ಷಗಳ ನಂತರ ಸಕ್ರಿಯ ರಾಜಕೀಯದಿಂದ ದೂರ ಸರಿದು ಈ ವರ್ಷ ಅಧ್ಯಕೀಯ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಅವರು ಹೇಳಿದ್ದಾರೆ. 66 ವರ್ಷದ ಥರ್ಮನ್, […]