ಏಕ ಬಳಕೆಯ ಪೆನ್ನುಗಳಿಂದ ಮುಕ್ತಿ ಪಡೆಯಲು ಮಾಹೆಯ ‘ರಿ-ಪೆನ್’ ಯೋಜನೆ 

ಮಣಿಪಾಲ: ಏಕ ಬಳಕೆಯ ಪೆನ್ನುಗಳ ಬಳಕೆಯನ್ನು ನಿರುತ್ಸಾಹಗೊಳಿಸುವ ಮತ್ತು ಮರುಪೂರಣವನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ‘ರಿ-ಪೆನ್’ ಎಂಬ ಸಿ. ಎಸ್. ಆರ್ ಪ್ರಾಯೋಜಿತ ಯೋಜನೆಯನ್ನು ಮಾಹೆಯ ಉಪಕುಲಪತಿ ಲೆಫ್ಟಿನೆಂಟ್ ಜನರಲ್ (ಡಾ.) ಎಂ.ಡಿ.ವೆಂಕಟೇಶ್ ಇವರು ಉದ್ಘಾಟಿಸಿದರು. ಈ ‘ರಿ-ಪೆನ್’ ಯೋಜನೆಯನ್ನು ಕೈಗೆತ್ತಿಕೊಳ್ಳಲು ಪುತ್ತೂರಿನ ಶ್ಯಾಮಾ ಜ್ಯುವೆಲ್ಸ್ ಪ್ರೈ. ಲಿ ಸಂಸ್ಥೆಯು ತನ್ನ ಸಿ. ಎಸ್. ಆರ್ ನಿಧಿಯಿಂದ ಆರ್ಥಿಕ ಸಹಾಯವನ್ನು ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸ್‌ನ ಇಕೋ ಕ್ಲಬ್ ಗೆ ನೀಡಿದೆ. ಪರಿಸರದ ಉಳಿವಿಗಾಗಿ ಇಂಗಾಲಾಮ್ಲದ […]

ನಗರಸಭೆ: ಜುಲೈ 16 ರಂದು ಏಕಬಳಕೆ ಪ್ಲಾಸ್ಟಿಕ್ ನಿಷೇಧ ಕುರಿತು ಸಭೆ

ಉಡುಪಿ: ಉಡುಪಿ ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ಜುಲೈ 16 ರಂದು ಮಧ್ಯಾಹ್ನ 12 ಗಂಟೆಗೆ ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳ ನಿಷೇಧ ಕುರಿತು ಸಭೆ ನಡೆಯಲಿದ್ದು, ಎಲ್ಲಾ ಹೋಟೆಲ್ ಮಾಲೀಕರು, ವರ್ತಕರು, ಬಾರ್ ಮತ್ತು ರೆಸ್ಟೋರೆಂಟ್ ಮಾಲೀಕರು, ಕಲ್ಯಾಣ ಮಂಟಪದ ಮಾಲೀಕರು, ಬೀದಿ ಬದಿ ವ್ಯಾಪಾರಿ ಸಂಘಗಳ ಸದಸ್ಯರು ಹಾಗೂ ಕೈಗಾರಿಕಾ ಸಂಘಟನೆಯ ಸದಸ್ಯರು ಸಭೆಯಲ್ಲಿ ಭಾಗವಹಿಸಿ, ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದು ನಗರಸಭೆಯ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.