ಅಂತರ್ ಕಾಲೇಜು ಸಾಂಸ್ಕೃತಿಕ ಕಾರ್ಯಕ್ರಮ ಸಮಾವೇಶ ‘ಸಿರಿ’ ಉದ್ಘಾಟನೆ, ಸಂಘಟನೆಯಿಂದ ಹೋರಾಟದ ಗುಣ: ಸೊರಕೆ
ಉಡುಪಿ: ವಿದ್ಯಾರ್ಥಿಗಳು ಸಂಘಟನೆಯ ಮೂಲಕ ಹೋರಾಟದ ಗುಣ ಬೆಳೆಯಲು ಸಾಧ್ಯವಾಗುತ್ತದೆ. ಜತೆಗೆ ಎನ್.ಎಸ್. ಯು.ಐ. ನಂತಹ ಸಂಘಟನೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ನಾಯಕತ್ವದ ಗುಣ ಬೆಳೆಯಲು ಸಹಕಾರಿಯಾಗುತ್ತದೆ ಎಂದು ಮಾಜಿ ಸಚಿವ ವಿನಯಕುಮಾರ ಸೊರಕೆ ಹೇಳಿದರು. ಅವರು ಬಾರ್ಕೂರಿನ ಸಂಕಮ್ಮ ತಾಯಿ ಸಭಾಂಗಣದಲ್ಲಿ ನ್ಯಾಷನಲ್ ಸ್ಟೂಡೆಂಟ್ ಯುನಿಯನ್ ಆಫ್ ಇಂಡಿಯಾ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಂತರ್ ಕಾಲೇಜು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸಮಾವೇಶ ಸಿರಿ-2019 ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿ ಶಕ್ತಿ ದೇಶದ ಬಹುದೊಡ್ಡ ಶಕ್ತಿಯಾಗಿದ್ದು, ಅದನ್ನು ಯಾವುದೇ ಸರಕಾರಗಳು […]