ಸೀತಾ ನದಿಗೆ ಉಪ್ಪುನೀರು ತಡೆ ಅಣೆಕಟ್ಟು ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಉಡುಪಿ: ಜಿಲ್ಲೆಯ ಉಡುಪಿ, ಕುಂದಾಪುರ ಭಾಗದಲ್ಲಿ ಹರಿಯುತ್ತಿರುವ ಸೀತಾ ನದಿಗೆ ಬ್ರಹ್ಮಾವರ ತಾಲೂಕಿನ 2 ಭಾಗದಲ್ಲಿ ಸೇತುವೆ ಸಹಿತ ಉಪ್ಪು ನೀರು ತಡೆ ಅಣೆಕಟ್ಟು ನಿರ್ಮಾಣಕ್ಕೆ ರೂ 311.25 ಕೋಟಿ ಮೊತ್ತದ ಯೋಜನೆಗೆ ಸೆಪ್ಟೆಂಬರ್ 14 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಸಮಗ್ರ ನೀರಾವರಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಈ ಭಾಗದ ಪ್ರಮುಖ ಬೇಡಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದ  ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಸಣ್ಣ ನೀರಾವರಿ ಸಚಿವರಾದ ಕೆ. […]