ಶಿವಮೊಗ್ಗದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ದುರಂತ: ಜಿಲೆಟಿನ್ ಸ್ಫೋಟಗೊಂಡು ಆರು ಜನ ಮೃತ್ಯು
ಚಿಕ್ಕಬಳ್ಳಾಪುರ: ಶಿವಮೊಗ್ಗದಲ್ಲಿ ನಡೆದ ಜಿಲೆಟಿನ್ ಸ್ಫೋಟ ದುರಂತ ಪ್ರಕರಣ ಮಾಸುವ ಮುನ್ನವೇ ಮತ್ತೆ ರಾಜ್ಯದಲ್ಲಿ ಮತ್ತೊಂದು ಜಿಲೆಟಿನ್ ಸ್ಫೋಟ ಪ್ರಕರಣ ನಡೆದಿದ್ದು, ಸ್ಫೋಟದ ತೀವ್ರತೆಗೆ ಆರು ಮಂದಿ ಸ್ಥಳದಲ್ಲೇ ಅಸುನೀಗಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಮಂಡಿಕಲ್ ಹೋಬಳಿಯ ಹಿರೇನಾಗವೇಲಿ ಗ್ರಾಮದ ಬಳಿ ಕಲ್ಲು ಗಣಿಗಾರಿಕೆ ಕ್ವಾರಿಯಲ್ಲಿ ರಾತ್ರಿ 12.45ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಆರೋಗ್ಯ ಸಚಿವ ಸುಧಾಕರ್ ತವರು ಕ್ಷೇತ್ರದಲ್ಲಿ ಇಂತಹದೊಂದು ದುರಂತ ನಡೆದಿದ್ದು, ಸ್ಫೋಟದ ತೀವ್ರತೆಗೆ ಹತ್ತಾರು ಕಿ.ಮೀ ವರೆಗೂ ಭೂಮಿ ಕಂಪಿಸಿದೆ. ಜಿಲೆಟಿನ್ […]