ಬಿಜೆಪಿ ಶಾಸಕನ ಹತ್ಯೆಗೆ ಸ್ಕೆಚ್: ಶಾಸಕನ ಆಪ್ತ, ಕಾಂಗ್ರೆಸ್ ಮುಖಂಡನ ಕೈವಾಡದ ಶಂಕೆ?

ಶಾಸಕ ವಿಶ್ವನಾಥ್ ಬೆಂಗಳೂರು: ಯಲಹಂಕ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಅವರ ಹತ್ಯೆಗೆ ಸ್ಕೆಚ್ ಹಾಕಲಾಗಿತ್ತು ಎಂಬ ಸುದ್ದಿ ಹೊರಬಿದ್ದಿದ್ದು, ಈ ಕುರಿತಾದ ವಿಡಿಯೋವೊಂದು ಹೊರಬಂದಿದೆ. ಈ ಬಗ್ಗೆ ಸಿಸಿಬಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ವಿಶ್ವಾನಾಥ್ ಎದುರು ಸ್ಪರ್ಧಿಸಿ ಸೋತಿದ್ದ ಕಾಂಗ್ರೆಸ್ ಮುಖಂಡ ಎಂ.ಎನ್. ಗೋಪಾಲಕೃಷ್ಣ ಎಂಬಾತನೇ ಹತ್ಯೆಗೆ ಸುಫಾರಿ ನೀಡಿದ್ದನು ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಚರ್ಚೆ ಮಾಡಿರುವ ವಿಡಿಯೋ ಸಿಸಿಬಿ ತಂಡಕ್ಕೆ ಸಿಕ್ಕಿದ್ದು, ಇದರ ಆಧಾರದ ಮೇಲೆ ತಡರಾತ್ರಿವರೆಗೂ ಸಿಸಿಬಿಯಿಂದ ಗೋಪಾಲಕೃಷ್ಣ ಅವರನ್ನು […]