ಉನ್ನತಿ ಕೆರಿಯರ್ ಅಕಾಡೆಮಿ: ಬ್ಯಾಂಕಿಂಗ್ ಫೈನಾಶಿಯಲ್ ತರಬೇತಿ ಪ್ರಮಾಣಪತ್ರ ವಿತರಣೆ ಹಾಗೂ ಸಂವಾದ ಕಾರ್ಯಕ್ರಮ
ಉಡುಪಿ: ಕೌಶಲ್ಯ ಶಿಕ್ಷಣಕ್ಕೆ ಪ್ರಸಿದ್ದಿ ಪಡೆದಿರುವ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ತರಬೇತಿ ಪಾಲುದಾರ ಸಂಸ್ಥೆಯಾದ ಉಡುಪಿಯ ಉನ್ನತಿ ಕೆರಿಯರ್ ಅಕಾಡೆಮಿಯು ಉಡುಪಿ ಜಿಲ್ಲೆಯ ಆಯ್ದ 60 ಅಭ್ಯರ್ಥಿಗಳಿಗೆ ಬ್ಯಾಂಕಿಂಗ್ ಮತ್ತು ಫೈನಾನ್ಶಿಯಲ್ ಕ್ಷೇತ್ರದ ಪ್ರಮುಖ ವಿಷಯಗಳಾದ ಕೆವೈಸಿ-ಎಎಂಎಲ್, ಕಸ್ಟಮರ್ ಸರ್ವೀಸ್, ಡಿಜಿಟಲ್ ಬ್ಯಾಂಕಿಂಗ್ ನಲ್ಲಿ ತರಬೇತಿ ನೀಡಿದ್ದು, ಇಂದು ಅಭ್ಯರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಉಡುಪಿ ಇಂಡಸ್ ಇಂಡ್ ಬ್ಯಾಂಕ್ ನ ಅಸಿಸ್ಟೆಂಟ್ ವೈಸ್ ಪ್ರೆಸಿಡೆಂಟ್ ಮತ್ತು ಬ್ರಾಂಚ್ ಮ್ಯಾನೇಜರ್ ನಿತಿನ್ ರವರು […]
ಪ.ಜಾತಿ-ಪ.ಪಂಗಡದ ಯುವಕರಿಗೆ ನಾರಾಯಣ ಹೃದಯಾಲಯದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ
ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಯುವ ಜನರಿಗೆ ಬೆಂಗಳೂರಿನ ಬೊಮ್ಮಸಂದ್ರದಲ್ಲಿರುವ ನಾರಾಯಣ ಹೃದಯಾಲಯದಲ್ಲಿ 6 ತಿಂಗಳ ಅವಧಿಗೆ ಆರೋಗ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, 18 ರಿಂದ 35 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಾರಾಯಣ ಹೃದಯಾಲಯದ ಕೌಸಲ್ಯಾ ದೇವಿ ಮೊ.ನಂ: 8525808078, ವಿಕಾಸ್ ಮೊ.ನಂ:7018879650 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉನ್ನತಿ ಕೆರಿಯರ್ ಅಕಾಡೆಮಿ ವತಿಯಿಂದ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಹಾಗೂ ಕೌಶಲ್ಯಾಭಿವೃದ್ಧಿ ತರಬೇತಿ ಒಪ್ಪಂದ
ಉಡುಪಿ: ಕೌಶಲ್ಯ ಶಿಕ್ಷಣಕ್ಕೆ ಪ್ರಸಿದ್ದಿ ಪಡೆದಿರುವ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ತರಬೇತಿ ಪಾಲುದಾರ ಸಂಸ್ಥೆಯಾದ ಉಡುಪಿಯ ಉನ್ನತಿ ಕೆರಿಯರ್ ಅಕಾಡೆಮಿ ವತಿಯಿಂದ ಕುಂದಾಪುರ ತಾಲೂಕಿನ ಶಂಕರನಾರಾಯಣ ಸರ್ಕಾರಿ ಪ್ರ.ದ.ಕಾಲೇಜಿನ ಅಂತಿಮ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮವನ್ನು ಶುಕ್ರವಾರ ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಕಮ್ಯೂನಿಕೇಶನ್ ಸ್ಕಿಲ್ಸ್, ವ್ಯಕ್ತಿತ್ವ ವಿಕಸನ, ಸಂದರ್ಶನ ಕಲೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಲಾಯಿತು.ಇದೇ ಸಂದರ್ಭದಲ್ಲಿ ಉನ್ನತಿ ಸಂಸ್ಥೆ ಹಾಗೂ ಕಾಲೇಜಿನ ನಡುವೆ ಕೌಶಲ್ಯ ಕರ್ನಾಟಕ ಯೋಜನೆಯಡಿ ಬ್ಯಾಂಕಿಂಗ್ ಹಾಗೂ […]
ಜಿಲ್ಲಾ ಕೌಶಲ್ಯಾಭಿವೃದ್ದಿ ಕೇಂದ್ರ: ರಾಜ್ಯದ ಕಟ್ಟಡ ಕಾರ್ಮಿಕರಿಗೆ ದುಬೈನಲ್ಲಿ ಉದ್ಯೋಗಾವಕಾಶ
ಉಡುಪಿ: ದುಬೈನ ಬೃಹತ್ ಕಟ್ಟಡ ನಿರ್ಮಾಣ ಸಂಸ್ಥೆಯಲ್ಲಿ ರಾಜ್ಯದ ಕಾರ್ಮಿಕರಿಗೆ 100 ಟೈಲ್ಸ್ ಮಾಸನ್ಸ್, 100 ಬ್ಲಾಕ್ ಮಾಸನ್ಸ್ ಮತ್ತು 100 ಮಾರ್ಬಲ್ ಮೇಸನ್ಸ್ ಉದ್ಯೋಗಳಿದ್ದು, 2 ವರ್ಷ ಅನುಭವ ಉಳ್ಳವರಿಗೆ ರೂ.21720-26064 ಹಾಗೂ ಹೊಸಬರಿಗೆ 18462-20634 ವೇತನವಿದ್ದು, ಹೆಚ್ಚಿನ ಮಾಹಿತಿಗಾಗಿ www.kvtsdc.com ಜಾಲತಾಣದಲ್ಲಿ ಹಾಗೂ ದೂ.ಸಂ.8310100754,080-29753007, ಈಮೇಲ್ [email protected] ಸಂಪರ್ಕಿಸುವಂತೆ ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಶ್ವ ಯುವ ಕೌಶಲ್ಯ ದಿನದ ಪ್ರಯುಕ್ತ ಜಿಲ್ಲೆಯ ಯುವಕ-ಯುವತಿಯರಿಗೆ ಉಚಿತ ತರಬೇತಿ,ಉದ್ಯೋಗಾವಕಾಶ: ಪ್ರೇಮ್ ಪ್ರಸಾದ್ ಶೆಟ್ಟಿ
ಉಡುಪಿ: ಕೌಶಲ್ಯ ಶಿಕ್ಷಣಕ್ಕೆ ಪ್ರಸಿದ್ಧಿ ಪಡೆದಿರುವ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಪಾಲುದಾರ ಸಂಸ್ಥೆಯಾದ ಉಡುಪಿಯ ಉನ್ನತಿ ಕೆರಿಯರ್ ಅಕಾಡೆಮಿಯಲ್ಲಿ ಇಂದು “ವಿಶ್ವ ಯುವ ಕೌಶಲ್ಯ ದಿನ”ವನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಸ್ಥಾಪಕ ಪ್ರೇಮ್ ಪ್ರಸಾದ್ ಶೆಟ್ಟಿ, “ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶವಾಗಿ ಭಾರತ ಹೊರಹೊಮ್ಮುತ್ತಿರುವ ಈ ಕಾಲಘಟ್ಟದಲ್ಲಿ ದೇಶದ ಯುವ ಶಕ್ತಿಯನ್ನು ಕೌಶಲ್ಯ ಭರಿತರನ್ನಾಗಿಸುವ ಸವಾಲು ನಮ್ಮೆಲ್ಲರ ಮೇಲಿದೆ. ಇಲ್ಲದೇ ಹೋದಲ್ಲಿ ಈ ಯುವ ಶಕ್ತಿಯು ನಿರುದ್ಯೋಗ, ಅಸಾಮಾಜಿಕ ಕೃತ್ಯಗಳಿಗೆ ಬಲಿಯಾಗುವ […]