ಸ್ವ-ಉದ್ಯೋಗಕ್ಕಾಗಿ ಕಡಿಮೆ ಬಡ್ಡಿದರದ ಸಾಲ ಸೌಲಭ್ಯ: ಅರ್ಜಿ ಆಹ್ವಾನ
ಉಡುಪಿ: ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ ಜಿಲ್ಲೆಯ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಬಡತನ ರೇಖೆಗಿಂತ ಕೆಳಗಿರುವ ನಿವಾಸಿಗಳು ಆರ್ಥಿಕ ಅಭಿವೃದ್ಧಿ ಸಾಧಿಸುವ ಸಲುವಾಗಿ ಸರಕಾರದ ದೀನದಯಾಳ್ ಅಂತ್ಯೋದಯ-ರಾಷ್ಟ್ರೀಯ ಜೀವನೋಪಾಯ ಅಭಿಯಾನದಡಿ ಪ್ರಸಕ್ತ ಸಾಲಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳುವ ಕುರಿತು ಸ್ವ-ಸಹಾಯ ಗುಂಪುಗಳ ಬ್ಯಾಂಕ್ ಕ್ರೆಡಿಟ್ ಲಿಂಕೇಜ್ ಕಾರ್ಯಕ್ರಮದಡಿ ಕಡಿಮೆ ಬಡ್ಡಿ ದರದ ಸಾಲ ಸೌಲಭ್ಯ, ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ (ಪಿ.ಎಂ.ಎಫ್.ಎಮ್.ಇ) ಕಾರ್ಯಕ್ರಮದಡಿ ಕಡಿಮೆ ಬಡ್ಡಿ […]
ಕಾಪು ಪ್ರಥಮ ದರ್ಜೆ ಕಾಲೇಜು: ವಿದ್ಯಾರ್ಥಿನಿಯರಿಗೆ ಸಾಫ್ಟ್ ಸ್ಕಿಲ್ಸ್ ಕುರಿತ ತರಬೇತಿ ಕಾರ್ಯಗಾರ
ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಇದರ ವತಿಯಿಂದ ನಾಂದಿ ಫೌಂಡೇಶನ್ ಮತ್ತು ಮಹೀಂದ್ರ ಫ್ರೆಂಡ್ ಕ್ಲಾಸ್ ರೂಮ್ ಇವರ ಸಹಯೋಗದೊಂದಿಗೆ ಕಾಪುವಿನ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿನಿಯರಿಗೆ ನಡೆದ ಸಾಫ್ಟ್ ಸ್ಕಿಲ್ಸ್ ಕುರಿತ ತರಬೇತಿ ಕಾರ್ಯಗಾರವನ್ನು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಜಗದೀಶ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕ ಅರುಣ್ ಬಿ, ಜಿಲ್ಲಾ ಸಲಹೆಗಾರ್ತಿ ಸಂಧ್ಯಾರಾಣಿ,ನಾಂದಿ ಫೌಂಡೇಶನ್ ತರಬೇತುದಾರ ಚಿನ್ನೀ ಅಜಯ್, ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
ಉಡುಪಿಯ ಉನ್ನತಿ ಕೆರಿಯರ್ ಅಕಾಡೆಮಿ ಮತ್ತು ಶ್ರೀ ಶಾರದಾ ಕಾಲೇಜು ನಡುವೆ ಕೌಶಲ್ಯಾಭಿವೃದ್ಧಿ ತರಬೇತಿ ಒಪ್ಪಂದ
ಉಡುಪಿ: ಕೌಶಲ್ಯ ಶಿಕ್ಷಣಕ್ಕೆ ಪ್ರಸಿದ್ದಿ ಪಡೆದಿರುವ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ತರಬೇತಿ ಪಾಲುದಾರ ಸಂಸ್ಥೆಯಾದ ಉಡುಪಿಯ ಉನ್ನತಿ ಕೆರಿಯರ್ ಅಕಾಡೆಮಿಯು, ಬಸ್ರೂರಿನ ಶ್ರೀ ಶಾರದಾ ಕಾಲೇಜು ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್, ಫೈನಾನ್ಶಿಯಲ್ ಮತ್ತು ಇನ್ಶುರೆನ್ಸ್ ಕ್ಷೇತ್ರದಲ್ಲಿ ಬಹುಬೇಡಿಕೆಯ ಬ್ಯುಸಿನೆಸ್ ಕರೆಸ್ಪಾಂಡೆನ್ಸ್ ಆಂಡ್ ಬ್ಯುಸಿನೆಸ್ ಫೆಸಿಲಿಟೆಟರ್ ತರಬೇತಿಗಳನ್ನು ಕೌಶಲ್ಯ ಕರ್ನಾಟಕ ಯೋಜನೆಯಡಿಯಲ್ಲಿ ಸಂಪೂರ್ಣ ಉಚಿತವಾಗಿ ನೀಡಲು ಒಪ್ಪಂದ ಮಾಡಿಕೊಂಡಿದೆ. ಈ ಒಪ್ಪಂದದಂತೆ ಉನ್ನತಿ ಸಂಸ್ಥೆಯು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿರುವ ಶ್ರೀ ಶಾರದಾ ಕಾಲೇಜಿನ ಬಿ.ಕಾಂ […]
‘ಉನ್ನತಿ – ಸಂಚಲನ ಮೆಗಾ ಸ್ಕಾಲರ್ ಶಿಪ್ ಸ್ಪರ್ಧೆ’: 3000ಕ್ಕೂ ಅಧಿಕ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ
ಉಡುಪಿ: ಈಗಾಗಲೇ ಕೌಶಲ್ಯಾಭಿವೃದ್ಧಿ ತರಬೇತಿಗಳಿಗೆ ಪ್ರಸಿದ್ಧಿ ಪಡೆದಿರುವ ಹಾಗೂ ಕರ್ನಾಟಕ ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮ (ಕೆ ಎಸ್ ಡಿ ಸಿ) ದ ತರಬೇತಿ ಪಾಲುದಾರ ಸಂಸ್ಥೆಯಾದ ಉನ್ನತಿ ಕೆರಿಯರ್ ಅಕಾಡೆಮಿ ಕಳೆದ ಮೂರು ವರ್ಷಗಳಿಂದ 3000ಕ್ಕೂ ಅಧಿಕ ಯುವಕ-ಯುವತಿಯರಿಗೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶ ಸೃಷ್ಟಿಸಿದೆ. ಈ ಕಾರ್ಯದ ಹಿಂದೆ ಸಂಚಲನ ಸ್ವಯಂ ಸೇವಾ ಸಂಘಟನೆ ಸಂಪೂರ್ಣ ಸಹಕಾರ ನೀಡುತ್ತಾ ಬರುತ್ತಿದೆ. ಇದೀಗ ಈ ಎರಡು ಸಂಸ್ಥೆಗಳ ಸಹಕಾರದೊಂದಿಗೆ ಉಡುಪಿ ಜಿಲ್ಲೆಯ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಪದವಿ […]
ಅಂತರಾಷ್ಟ್ರೀಯ ಮಟ್ಟದ ಕೌಶಾಲ್ಯಾಭಿವೃದ್ದಿ ತರಬೇತಿ ಸಂಸ್ಥೆ ಡ್ರೀಮ್ ಜೋನ್ ನಲ್ಲಿ 2022 ನೇ ಸಾಲಿನ ದಾಖಲಾತಿ ಆರಂಭ
ಉಡುಪಿ: ಡ್ರೀಮ್ ಜೋನ್ ಸ್ಕೂಲ್ ಆಫ್ ಕ್ರಿಯೇಟಿವ್ ಸ್ಟಡೀಸ್ ಉಡುಪಿ ಸಂಸ್ಥೆಯು ನಗರದ ಸಿಟಿ ಬಸ್ ಸ್ಟ್ಯಾಂಡ್ ಬಳಿಯ ರಾಜ್ ಟವರ್ಸ್ ನ 4 ನೇ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಇದು ಒಂದು ಅಂತರಾಷ್ಟ್ರೀಯ ಮಟ್ಟದ ಕೌಶಾಲ್ಯಾಭಿವೃದ್ದಿ ತರಬೇತಿ ಸಂಸ್ಥೆಯಾಗಿದ್ದು ಸರಕಾರದ NSDC ಯಿಂದ ಮಾನ್ಯತೆ ಪಡೆದು ಕೋರ್ಸ್ ಗಳನ್ನು ನಡೆಸುತ್ತಿದೆ. ಸಂಸ್ಥೆಯಲ್ಲಿ ಫ್ಯಾಶನ್ ಡಿಸೈನಿಂಗ್, ಇಂಟೀರಿಯರ್ ಡಿಸೈನಿಂಗ್, ಗ್ರಾಫಿಕ್ ಮತ್ತು ವೆಬ್ ಡಿಸೈನಿಂಗ್, ಮುಂತಾದ ಹಲವು ಕೋರ್ಸ್ ಗಳು ಲಭ್ಯವಿದೆ. 3 ತಿಂಗಳ ಅಲ್ಪಾವಧಿ ಕೋರ್ಸ್ ನಿಂದ […]