ಬ್ರಹ್ಮಾವರ: ಎಸ್.ಎಮ್.ಎಸ್ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ
ಬ್ರಹ್ಮಾವರ: ಎಸ್ ಎಮ್.ಎಸ್. ಕಾಲೇಜಿನ 2022-23ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವು ಬುಧವಾರದಂದು ಕಾಲೇಜಿನ ಡಾ. ಬಿ.ವಿ.ಶೆಟ್ಟಿ ಸಭಾಂಗಣದಲ್ಲಿ ನೆರವೇರಿತು. ಕಾಲೇಜಿನ ಸಂಚಾಲಕ ರೆ.ಫಾ. ಎಮ್.ಸಿ. ಮಥೈ ಇವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಉದ್ಘಾಟಕರಾಗಿ ಆಗಮಿಸಿದ ಎಸ್.ಡಿ.ಪಿ.ಟಿ ಕಾಲೇಜು ಮಂದಾರ್ತಿಯ ಹಿಂದಿ ಉಪನ್ಯಾಸಕಿ ಶ್ರೀಮತಿ ರೇಷ್ಮಾ ಶೆಟ್ಟಿ ಇವರು ದೀಪ ಬೆಳಗಿಸಿ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ, ತಮ್ಮ ವಿದ್ಯಾರ್ಥಿ ಜೀವನದಲ್ಲಿ ವಿದ್ಯಾರ್ಥಿ ಸಂಘದೊಂದಿಗೆ ಕ್ರಿಯಾಶೀಲರಾಗಿ ದುಡಿದ ನೆನಪುಗಳನ್ನು ಹಂಚಿಕೊಳ್ಳುತ್ತಾ ವಿದ್ಯಾರ್ಥಿಗಳಲ್ಲಿ ಆತ್ಮಸ್ಠೈರ್ಯವನ್ನು ಹೆಚ್ಚಿಸುವಲ್ಲಿ ವಿದ್ಯಾರ್ಥಿ ಸಂಘದ […]
ಬ್ರಹ್ಮಾವರ: ಕನ್ನಡ ನಾಡು-ನುಡಿ ಸಂಸ್ಕೃತಿಗಾಗಿ ಸಾರ್ವಜನಿಕ ಛದ್ಮವೇಷ ಸ್ಪರ್ಧೆ
ಬ್ರಹ್ಮಾವರ: ಕನ್ನಡ ರಾಜ್ಯೋತ್ಸವ ಸಂಭ್ರಮದ ಹಿಗ್ಗನ್ನು ಇನ್ನಷ್ಟು ಹೆಚ್ಚಿಸಲು ಮಂದಾರ ಸಾಂಸ್ಕೃತಿಕ ಹಾಗೂ ಸೇವಾ ಸಂಘಟನೆ ಗಾಂಧಿನಗರ ಬೈಕಾಡಿ, ಎಸ್ಎಂಎಸ್ ಪದವಿ ಪೂರ್ವ ಕಾಲೇಜು ಬ್ರಹ್ಮಾವರ ಇವರ ಸಹಯೋಗದೊಂದಿಗೆ ‘ನುಡಿ ಚಿತ್ತಾರ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ನ. 06 ರ ಭಾನುವಾರ ಬೆಳಿಗ್ಗೆ 9:30 ಗಂಟೆಗೆ ಎಸ್ಎಂಎಸ್ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಕನ್ನಡ ನಾಡಿನ ನುಡಿ ಹಾಗೂ ಸಂಸ್ಕೃ ತಿ ಎಂಬುವುದು ಅನನ್ಯವಾದ ಸಾಂಸ್ಕೃತಿಕ ಶ್ರೀಮಂತಿಕೆಯ ಆಗರ. ಬದಲಾಗುತ್ತಿರುವ ಕಾಲಘಟ್ಟದಲ್ಲಿ ಭಾಷೆ ಹಾಗೂ ಈ […]
ಬ್ರಹ್ಮಾವರ: ಎಸ್ ಎಂ ಎಸ್ ಕಾಲೇಜಿನಲ್ಲಿ ಕೋಟಿ ಕಂಠ ಗಾಯನ
ಬ್ರಹ್ಮಾವರ: 67ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಶುಕ್ರವಾರದಂದು ಎಸ್ ಎಂ ಎಸ್ ಕಾಲೇಜಿನಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಅಧ್ಯಾಪಕರು ,ಅಧ್ಯಾಪಕೇತರ ವೃಂದದವರು ಹಾಗೂ 800 ವಿದ್ಯಾರ್ಥಿಗಳು ಭಾಗವಹಿಸಿದರು. ಈ ವಿಶೇಷ ಕಾರ್ಯಕ್ರಮದಲ್ಲಿ ಸರಕಾರದ ಆದೇಶದಂತೆ ಕನ್ನಡ ನಾಡು ನುಡಿ ಶ್ರೇಷ್ಠತೆಯನ್ನು ಸಾರುವ 6 ಗೀತೆಗಳನ್ನು ಹಾಡಲಾಯಿತು ಹಾಗೂ ಕನ್ನಡ ನಾಡು-ನುಡಿ ಉಳಿಸಲು ಬದ್ಧರಾಗಿರುವುದಾಗಿ ಪ್ರತಿಜ್ಞೆ ಮಾಡಲಾಯಿತು.