ಇಲ್ಲಿನ ವಿದ್ಯಾರ್ಥಿಗಳಿಗೆ ಪರಿಸರವೆಂದರೆ ಭಾರೀ “ಸ್ನೇಹ” ಎಳೆಯ ಕಂಗಳಿಗೆ ಪರಿಸರ ಪಾಠ ಮಾಡ್ತಿದೆ ಸುಳ್ಯದ ಸ್ನೇಹ ಶಾಲೆ
ನಮಗೋಸ್ಕರ ಶುದ್ದ ಗಾಳಿ, ನೀರು, ಬದುಕು ನೀಡುವ ಪರಿಸರವನ್ನು ಕಾಪಾಡದಿದ್ದರೆ ನಮಗೆ ಬದುಕೇ ಇಲ್ಲ. ನಮಗೆ ಎಲ್ಲದ್ದಕ್ಕೂ ಪರಿಸರ ಬೇಕು. ಆದರೆ ಪರಿಸರವನ್ನು ಪ್ರೀತಿಸುವುದರಲ್ಲಿ ನಾವು ಹಿಂದೇಟು ಹಾಕುತ್ತಿದ್ದೇವೆ. ಅದರಲ್ಲೂ ಪರಿಸರ ಶಿಕ್ಷಣ ಕೊಡಬೇಕಾದ ಶಿಕ್ಷಣ ಸಂಸ್ಥೆಗಳು, ಪರಿಸರ ದಿನಕ್ಕೊಮ್ಮೆ ಗಿಡ ನೆಟ್ಟು ಆಮೇಲೆ ಪರಿಸರ ಪ್ರೀತಿಯನ್ನೇ ಮರೆತುಬಿಡುತ್ತವೆ. ಆದರೆ ಇಲ್ಲೊಂದು ಅಪರೂಪದ ಶಿಕ್ಷಣ ಸಂಸ್ಥೆ ಪರಿಸರ ಸಂರಕ್ಷಣೆಗೆ ವಿದ್ಯಾರ್ಥಿಗಳನ್ನು ತಯಾರು ಮಾಡಿದೆ. ಆ ಮೂಲಕ ಪರಿಸರ ರಕ್ಷಣೆಗೆ ಸತತ ಹೆಗಲು ಕೊಡುತ್ತಲೇ ಇದೆ. ಈ ಶಾಲೆ […]