ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ: ನಿಗಾ ವಹಿಸಲು ಕೇಂದ್ರ ವೀಕ್ಷಕರ ಸೂಚನೆ
ಉಡುಪಿ: ಸಾಮಾಜಿಕ ಜಾಲತಾಣಗಳಲ್ಲಿ ಚುನಾವಣಾ ಪ್ರಚಾರ ನಡೆಸುವುದರ ವಿರುದ್ಧ ತೀವ್ರ ನಿಗಾ ಇಡಬೇಕು. ಸಾಮಾಜಿಕ ಜಾಲತಾಣಗಳು ಇಲೆಕ್ಟ್ರಾನಿಕ್ ಮಾಧ್ಯಮವಾಗಿರುವುದರಿಂದ ಅವುಗಳಲ್ಲಿ ನಡೆಸುವ ಯಾವುದೇ ಪ್ರಚಾರವು ಪೂರ್ವಾನುಮತಿ ಪಡೆದಿರಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕೇಂದ್ರ ವೀಕ್ಷಕ ಕೃಷ್ಣ ಕುನಾಲ್ ಸೂಚಿಸಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಅಧಿಕಾರಿಗಳ ಜಂಟೀ ಸಭೆ ನಡೆಸಿ ಮಾತನಾಡುತ್ತಿದ್ದರು. ಲೋಕಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಳವಾಗಲು ಇನ್ನಷ್ಟು ಪರಿಣಾಮಕಾರಿಯಾದ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಬೇಕು. ಮತದಾರರಿಗೆ ಮತದಾನಕ್ಕೆ […]