ರೆಡ್‌ಕ್ರಾಸ್ ಸಂಸ್ಥೆಯ ಸಮಾಜಮುಖಿ ಸೇವೆಗಳು ಶ್ಲಾಘನೀಯ: ಶಾಸಕ ಯಶ್‌ಪಾಲ್ ಸುವರ್ಣ

ಉಡುಪಿ: ರೆಡ್‌ಕ್ರಾಸ್ ಸಂಸ್ಥೆಯು ಮಾನವೀಯತೆಯ ನೆಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸಂಸ್ಥೆಯಾಗಿದ್ದು, ಯುದ್ಧ, ನೆರೆ ಮತ್ತು ಪ್ರಾಕೃತಿಕ ವಿಕೋಪಗಳಂತಹ ಸಂದರ್ಭದಲ್ಲಿ ಮಾಡುತ್ತಿರುವ ಸಮಾಜಮುಖಿ ಸೇವಾ ಚಟುವಟಿಕೆಗಳು ಹಾಗೂ ಪ್ರಥಮ ಚಿಕಿತ್ಸಾ ತರಬೇತಿ, ರಕ್ತದಾನ ಮತ್ತು ಆರೋಗ್ಯ ತಪಾಸಣಾ ಶಿಬಿರಗಳನ್ನು ಏರ್ಪಡಿಸಿ, ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ ಎಂದು ಶಾಸಕ ಯಶ್‌ಪಾಲ್ ಸುವರ್ಣ ಹೇಳಿದರು. ಅವರು ಇಂದು ನಗರದ ಅಜ್ಜರಕಾಡು ರೆಡ್‌ಕ್ರಾಸ್ ಭವನದ ಹೆನ್ರಿ ಡ್ಯುನಾಂಟ್ ಹಾಲ್‌ನಲ್ಲಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕ ಮತ್ತು ಡಾ. […]