ಪರಿಶಿಷ್ಟ ಜಾತಿಯ ಕಾನೂನು ಪದವೀಧರರ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ
ಉಡುಪಿ: ಪ್ರಸಕ್ತ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿಯ ಕಾನೂನು ಪದವೀಧರರು ಹಿರಿಯ ವಕೀಲರ ಬಳಿ ತರಬೇತಿ ಪಡೆಯುವ ಅವಧಿಯಲ್ಲಿ ಶಿಷ್ಯವೇತನ ಸೌಲಭ್ಯ ಪಡೆಯಲು ಇಲಾಖಾ ವೆಬ್‌ಸೈಟ್ www.sw.kar.nic.inನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ಅಥವಾ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು […]
ಉತ್ತಮ ಸಾಧನೆ ಮಾಡಿರುವ ಶಾಲೆಗಳಿಂದ ಪ್ರತಿಷ್ಠಿತ ಶಾಲೆ ಮಾನ್ಯತೆಗಾಗಿ ಅರ್ಜಿ ಆಹ್ವಾನ
ಉಡುಪಿ : ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅರ್ಥಿಕವಾಗಿ ಹಿಂದುಳಿದಿರುವ ಪರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಮುಂಬರಲು ಸಹಾಯವಾಗುವಂತೆ ಜಿಲ್ಲೆಯಲ್ಲಿನ ಪ್ರತಿಷ್ಟಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶ ಕಲ್ಪಿಸಿ ಪಿಯುಸಿ ವ್ಯಾಸಂಗದವರೆಗೆ ಶಿಕ್ಷಣ ಕಲ್ಪಿಸಲು ಸರಕಾರದಿಂದ ಯೋಜನೆಯನ್ನು ರೂಪಿಸಲಾಗಿದೆ. ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಖಾಸಗಿ ಶಾಲೆ ಮತ್ತು ಕಾಲೇಜುಗಳಲ್ಲಿ ಉತ್ತಮ ಮೂಲಭೂತ ಸೌಕರ್ಯ, ಭೋದನೆ, ಗ್ರಂಥಾಲಯ, ಪ್ರಯೋಗಾಲಯ ,ಕ್ರೀಡಾ ಚಟುವಟಿಕೆ, ಕಳೆದ 3 ವರ್ಷಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಶೇ 100 ಫಲಿತಾಂಶ ಹೊಂದಿರುವ ಶಾಲೆಗಳನ್ನು ಪ್ರತಿಷ್ಠಿತ […]
ಮ್ಯಾನ್ಯುಯಲ್ ಸ್ಕ್ಯಾಂವೆಜರ್ಸ್ ಜಾಗೃತ ಸಮಿತಿ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ
ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಮ್ಯಾನ್ಯುಯಲ್ ಸ್ಕ್ಯಾಂವೆಜರ್ಸ್ ನೇಮಕಾತಿ, ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮದಡಿ ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ಜಾಗೃತ ಸಮಿತಿಗಳನ್ನು ರಚಿಸಲಾಗಿದ್ದು, ಸಮಿತಿಗೆ 4 ಜನ ಸಾಮಾಜಿಕ ಕಾರ್ಯಕರ್ತರನ್ನು ನಾಮನಿರ್ದೇಶಿತ ಸದಸ್ಯರನ್ನಾಗಿ ಆಯ್ಕೆ ಮಾಡಲು, ಮ್ಯಾನ್ಯುಯಲ್ ಸ್ಕ್ಯಾಂವೆಜರ್ಸ್ ಪುನರ್ವಸತಿಗಾಗಿ ಕೆಲಸ ಮಾಡುತ್ತಿರುವ ಸಂಘಟನೆಗಳಿಗೆ ಸೇರಿದ, ಸಮುದಾಯವನ್ನು ಪ್ರತಿನಿಧಿಸುವ ಹಾಗೂ ಜಿಲ್ಲೆಯಲ್ಲಿ ವಾಸವಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, […]
ಪ.ಜಾತಿ ಮತ್ತು ಪ.ಪಂಗಡದ ನಿರುದ್ಯೋಗಿ ಯುವಕ-ಯುವತಿಯರಿಗೆ ಸ್ವ-ಉದ್ಯೋಗಕ್ಕಾಗಿ ದ್ವಿಚಕ್ರ ವಾಹನ ವಿತರಣೆ: ಕೋಟಾ ಶ್ರೀನಿವಾಸ್ ಪೂಜಾರಿ
ಉಡುಪಿ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಸಮುದಾಯದ ಯುವಕ ಯುವತಿಯರಿಗೆ ರಾಜ್ಯಾದ್ಯಂತ 28 ಸಾವಿರ ದ್ವಿಚಕ್ರ ವಾಹನಗಳನ್ನು ವಿತರಿಸಲು ನಿರ್ಧರಿಸಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು. ತಮ್ಮ ಇಲಾಖೆಯ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮಂಗಳವಾರ ವಿಡಿಯೋ ಸಂವಾದದ ಮೂಲಕ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಪ್ರಸಕ್ತ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ವಿವಿಧ ನಿಗಮಗಳ ಮೂಲಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ-ಯುವತಿಯರಿಗೆ ಸ್ವ-ಉದ್ಯೋಗಕ್ಕೆ ಅನುಕೂಲವಾಗುವಂತೆ ಸರಕು […]
ಕಾಂತಾರ ಕಂಡು ಆನಂದಿಸಿದ ಕೋಟ ಶ್ರೀನಿವಾಸ ಪೂಜಾರಿ: ರಿಷಭ್ ಶೆಟ್ಟಿಗೆ ಅಭಿನಂದನೆ ಎಂದ ಸಚಿವರು
ಕೋಟ: ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಇವರು ಗುರುವಾರ ದೈವ ನರ್ತಕರು, ಕಲಾವಿದರು ಹಾಗೂ ದೈವ ಪಾತ್ರಿಗಳ ಜೊತೆಯಲ್ಲಿ ಕಾಂತಾರ ಚಲನಚಿತ್ರವನ್ನು ವೀ ಕ್ಷಿಸಿದರು. ಗಲ್ಲಾ ಪೆಟ್ಟಿಗೆಯನ್ನು ಕೊಳ್ಳೆ ಹೊಡೆಯುತ್ತಿರುವ, ಜನರನ್ನು ಬೇರೆಯದೇ ಲೋಕಕ್ಕೆ ಕೊಂಡೊಯ್ಯುವ ಕರಾವಳಿಯ ಜೀವನಾಡಿಯ ಕಾಂತಾರ ಚಲನಚಿತ್ರವನ್ನು ಕೋಟೇಶ್ವರದ ಭಾರತ್ ಸಿನಿಮಾ ಮಂದಿರದಲ್ಲಿ ಸಚಿವರು ನೋಡಿದರು. ಈ ಸಂದರ್ಭದಲ್ಲಿ ಚಲನಚಿತ್ರ ನೋಡಲು ಆಗಮಿಸಿದ್ದ ದೈವ ನರ್ತಕರನ್ನು ಹಾಗೂ ಚಲನಚಿತ್ರದಲ್ಲಿ ಭಾಗವಹಿಸಿ ಪಾತ್ರ ನಿರ್ವಹಣೆ […]