ಅರಿವು ಮೂಡಿಸುವ ಕಾರ್ಯಕ್ರಮ ಆಯೋಜನೆಗೆ ಅರ್ಜಿ ಆಹ್ವಾನ
ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಸ್ಪೃಶ್ಯತಾ ನಿವಾರಣೆ, ಎಸ್.ಸಿ, ಎಸ್.ಟಿ ದೌರ್ಜನ್ಯ ತಡೆ ಕಾಯ್ದೆ ಮತ್ತು ಇಲಾಖಾ ಕಾರ್ಯಕ್ರಮ ಹಾಗೂ ಸೌಲಭ್ಯಗಳ ಕುರಿತು ಅರಿವು ಮೂಡಿಸಲು ವಿಚಾರಗೋಷ್ಠಿ, ಕಾರ್ಯಾಗಾರ ಮತ್ತು ಬೀದಿ ನಾಟಕಗಳನ್ನು ನಡೆಸಲು ಅರ್ಹ ಎಸ್.ಸಿ ಹಾಗೂ ಎಸ್.ಟಿ ಸಂಘ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.