ಪ.ಜಾತಿ-ಪ.ಪಂಗಡದ ಯುವಕರಿಗೆ ನಾರಾಯಣ ಹೃದಯಾಲಯದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ
ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಯುವ ಜನರಿಗೆ ಬೆಂಗಳೂರಿನ ಬೊಮ್ಮಸಂದ್ರದಲ್ಲಿರುವ ನಾರಾಯಣ ಹೃದಯಾಲಯದಲ್ಲಿ 6 ತಿಂಗಳ ಅವಧಿಗೆ ಆರೋಗ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, 18 ರಿಂದ 35 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಾರಾಯಣ ಹೃದಯಾಲಯದ ಕೌಸಲ್ಯಾ ದೇವಿ ಮೊ.ನಂ: 8525808078, ವಿಕಾಸ್ ಮೊ.ನಂ:7018879650 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾಮೂಹಿಕ ಸರಳ ವಿವಾಹ: ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ
ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಜಿಲ್ಲೆಯ ಪರಿಶಿಷ್ಟ ಜಾತಿಯ ಯುವಕ ಯುವತಿಯರು ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮದಡಿ ವಿವಾಹವಾದವರಿಗೆ 50,000 ರೂ. ಪ್ರೋತ್ಸಾಹ ಧನ ನೀಡಲಾಗುತ್ತಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಯನ್ನು ಇಲಾಖಾ ವೆಬ್‍ಸೈಟ್ www.sw.kar.nic.in ನಲ್ಲಿ ಸಲ್ಲಿಸಿ, ಸೂಕ್ತ ದಾಖಲೆಯೊಂದಿಗೆ ಒಂದು ವಾರದೊಳಗೆ ಕಚೇರಿಗೆ ನೀಡಬೇಕೆಂದು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ರಜತಾದ್ರಿ ಮಣಿಪಾಲ ದೂರವಾಣಿ ಸಂಖ್ಯೆ: 0820-2574892 ಅನ್ನು ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು […]