ಗ್ರಾಮವಾಸ್ತವ್ಯದ ಮೂಲಕ ಒಂದೇ ಸೂರಿನಡಿ ಗ್ರಾಮಸ್ಥರ ಸಮಸ್ಯೆಗೆ ಪರಿಹಾರ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ: ಗ್ರಾಮೀಣ ಭಾಗದ ಜನರ ಆಶೋತ್ತರಗಳನ್ನು ಅವರ ಬಳಿಯೇ ಬಂದು ಕೇಳಿ, ಬಗೆಹರಿಸಬೇಕೆಂಬ ಆಶಯದೊಂದಿಗೆ ಸರಕಾರದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎಂಬ ಕಾರ್ಯಕ್ರಮದಡಿ ಹಿರ್ಗಾನ ಗ್ರಾಮಕ್ಕೆ ಬಂದು ಇಲ್ಲಿನ ಜನರ ಸಮಸ್ಯೆಗಳನ್ನು ಪರಿಹರಿಸಲು ಮುಂದಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು. ಅವರು ಕಾರ್ಕಳ ತಾಲೂಕು ಅಜೆಕಾರು ಹೋಬಳಿಯ ಹಿರ್ಗಾನ ಗ್ರಾಮದ ವ್ಯವಸಾಯ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ, ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಂದಾಯ ಸಚಿವರು […]