ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಸಮಸ್ಯೆಗೆ ಪರಿಹಾರ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ
ಉಡುಪಿ: ಸಾರ್ವಜನಿಕರು ಜನತಾ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಹವಾಲುಗಳನ್ನು ಸಲ್ಲಿಸಿ, ತಮ್ಮ ಸಮಸ್ಯೆಗಳಿಗೆ ಪರಿಹಾರೋಪಾಯಗಳನ್ನು ಕಂಡುಕೊಳ್ಳಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಇಂದು ಕಾಪು ಆಡಳಿತ ಸೌಧದಲ್ಲಿ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಉಡುಪಿ, ತಾಲೂಕು ಆಡಳಿತ ತಾಲೂಕು ಪಂಚಾಯತ್ ಹಾಗೂ ಕಾಪು ಪುರಸಭೆ ಇವರ ಸಹಯೋಗದೊಂದಿಗೆ ನಡೆದ ಜನತಾ ದರ್ಶನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜನತಾ ದರ್ಶನ ಕಾರ್ಯಕ್ರಮವು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಉದ್ದೇಶದಿಂದ ಮಾಡಲಾಗುತ್ತಿದೆ. ಜನರು ಸಲ್ಲಿಸಿದ […]