ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟು: ಕಾಂಗ್ರೆಸ್ ನ 82 ಶಾಸಕರ ರಾಜೀನಾಮೆಯಿಂದ ಅಧ್ಯಕ್ಷರಿಗೆ ಇಕ್ಕಟ್ಟು

ಜೈಪುರ: ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ನಿಷ್ಠರಾಗಿರುವ 82 ಶಾಸಕರು ಭಾನುವಾರ ರಾತ್ರಿ ರಾಜ್ಯ ವಿಧಾನಸಭೆಗೆ ರಾಜೀನಾಮೆ ನೀಡಿದ ನಂತರ ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟು ಸ್ಫೋಟಗೊಂಡಿದೆ. ಜುಲೈ 2020 ರಲ್ಲಿ ಗೆಹ್ಲೋಟ್ ಸರ್ಕಾರದ ವಿರುದ್ಧ ಬಂಡಾಯವೆದ್ದವರಿಂದ ಹೊಸ ರಾಜಸ್ಥಾನ ಮುಖ್ಯಮಂತ್ರಿ ನೇಮಕವನ್ನು ಇತರ ಶಾಸಕರು ವಿರೋಧಿಸುತ್ತಿದ್ದಾರೆ. ಕಾಂಗ್ರೆಸ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಅಶೋಕ್ ಗೆಹ್ಲೋಟ್ ಗೆದ್ದರೆ ಸಚಿನ್ ಪೈಲಟ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುತ್ತಾರೆ ಎಂಬ ಊಹಾಪೋಹದ ನಂತರ ಈ ಬೆಳವಣಿಗೆ ಕಂಡುಬಂದಿದೆ. ಏತನ್ಮಧ್ಯೆ, ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ […]
ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆಯು ಕಾಂಗ್ರೆಸ್ ಜನತೆಗೆ ಬಗೆದ ಘೋರ ದ್ರೋಹವನ್ನು ಪುಷ್ಠೀಕರಿಸಿದೆ: ಜಿಲ್ಲಾ ಬಿಜೆಪಿ ಆರೋಪ

ಉಡುಪಿ: ‘ನೆಹರೂ, ಇಂದಿರಾ ಗಾಂಧಿ, ಸೋನಿಯಾ ಗಾಂಧಿ ಹೆಸರಲ್ಲಿ ಮೂರು ನಾಲ್ಕು ತಲೆಮಾರಿಗೆ ಆಗುವಷ್ಟನ್ನು ನಾವು ಮಾಡಿಕೊಂಡಿದ್ದೇವೆ…’ ಎಂಬ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗಂಟಾಘೋಷದ ನುಡಿ ಮುತ್ತುಗಳು ಕಾಂಗ್ರೆಸ್ ಈ ದೇಶವನ್ನು ಲೂಟಿಗೈದು ದೇಶವಾಸಿಗಳಿಗೆ ಎಸಗಿರುವ ಅಕ್ಷಮ್ಯ ಘೋರ ದ್ರೋಹವನ್ನು ಪುಷ್ಠೀಕರಿಸಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಆರೋಪಿಸಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದ ಮುಂದೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ವಿಚಾರಣೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ನಡೆದ ಕಾಂಗ್ರೆಸ್ ಪ್ರತಿಭಟನೆಯ ಸಂದರ್ಭದಲ್ಲಿ ಸ್ವತ: […]
ನೆಹರು-ಗಾಂಧಿ ಹೆಸರಲ್ಲಿ 3-4 ತಲೆಮಾರುಗಳಿಗಾಗುವಷ್ಟು ಹಣ ಸಂಪಾದನೆ ಮಾಡಿದ್ದೇವೆ: ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್

ಬೆಂಗಳೂರು: ಪಂಡಿತ್ ನೆಹರು, ಇಂದಿರಾ ಗಾಂಧಿ ಮತ್ತು ಸೋನಿಯಾ ಗಾಂಧಿಯವರ ಹೆಸರಿನಲ್ಲಿ ನಾವು 3-4 ತಲೆಮಾರುಗಳಿಗಾಗುವಷ್ಟು ಸಂಪಾದಿಸಿದ್ದೇವೆ. ಈಗ ತ್ಯಾಗ ಮಾಡುವ ಸಮಯ ಬಂದಿದೆ. ಆ ಸಾಲವನ್ನು ತೀರಿಸಲು ನಾವು ಸಿದ್ಧರಿಲ್ಲದಿದ್ದರೆ, ನಾವು ತಿನ್ನುವ ಆಹಾರದಲ್ಲಿ ಹುಳುಗಳು ಬೀಳುತ್ತವೆ ಎಂದು ನಾನು ಹೆದರುತ್ತೇನೆ ಎಂದು ಸೋನಿಯಾ ಗಾಂಧಿ ವಿರುದ್ಧದ ಇಡಿ ಪ್ರಕರಣವನ್ನು ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ವೇಳೆ ಕಾಂಗ್ರೆಸ್ ಶಾಸಕ ಕೆ.ಆರ್. ರಮೇಶ್ ಕುಮಾರ್ ಹೇಳಿದ್ದಾರೆ. ಗುರುವಾರದಂದು ಸೋನಿಯಾ ಗಾಂಧಿ ಇಡಿ ಮುಂದೆ ಹಾಜರಾಗಿದ್ದಾರೆ. ಸೋನಿಯಾ ಗಾಂಧಿ […]
ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ ಗಾಂಧಿಗೆ ಇಡಿ ಸಮನ್ಸ್, ಜುಲೈ 21 ರಂದು ಹಾಜರಾಗಲು ಕೋರಿಕೆ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜುಲೈ 21 ರಂದು ಏಜೆನ್ಸಿಯ ಮುಂದೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ಇಡಿ) ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಹೊಸ ಸಮನ್ಸ್ ನೀಡಿದೆ. ಕೋವಿಡ್ -19 ರಿಂದ ಚೇತರಿಸಿಕೊಳ್ಳುವುದನ್ನು ಉಲ್ಲೇಖಿಸಿ ಸೋನಿಯಾ ಗಾಂಧಿ ಈ ಹಿಂದೆ ತನಿಖಾ ಸಂಸ್ಥೆಗೆ ಪತ್ರ ಬರೆದಿದ್ದರು. ಮೊದಲನೆ ನೋಟೀಸ್ ನೀಡಿದಾಗ ಸೋನಿಯಾ ಗಾಂಧಿಗೆ ಕೋವಿಡ್ ಪತ್ತೆ ಪರೀಕ್ಷೆಯಲ್ಲಿ ಸಂಕ್ರಮಣ ಇದೆ ಎಂದಾಗಿತ್ತು ಮತ್ತೆ ಆಕೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆ ಬಳಿಕ ಜೂನ್ 23 ರಂದು ಹಾಜರಾಗಲು […]
ಶಿಲೀಂಧ್ರ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿರುವ ಸೋನಿಯಾ ಗಾಂಧಿ: ಪಕ್ಷದಿಂದ ಮಾಹಿತಿ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಸ್ತುತ ಕೋವಿಡ್ ನಂತರದ ಇತರ ರೋಗಲಕ್ಷಣಗಳ ಜೊತೆಗೆ ಅವರ ಕೆಳ ಶ್ವಾಸೇಂದ್ರಿಯ ಪ್ರದೇಶದಲ್ಲಿ ಪತ್ತೆಯಾದ ಶಿಲೀಂಧ್ರಗಳ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಕೆಯನ್ನು ನಿಕಟವಾಗಿ ಗಮನಿಸಲಾಗುತ್ತಿದೆ ಮತ್ತು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕಾಂಗ್ರೆಸ್ ಪಕ್ಷ ತಿಳಿಸಿದೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿದ್ದಾರೆ.