ಶೇಕ್ಸ್‌ಪಿಯರ್ ನಾಟಕಗಳಲ್ಲಿ ನೈತಿಕತೆ ಮತ್ತು ರಾಜಕೀಯ ನೈಜ ಜಗತ್ತಿನ ಚಿತ್ರಣವಿದೆ: ಪ್ರೊ.ಎನ್. ಮನು ಚಕ್ರವರ್ತಿ
ಮಣಿಪಾಲ: ಶೇಕ್ಸ್‌ಪಿಯರ್ ತನ್ನ ದುರಂತ ನಾಟಕಗಳಲ್ಲಿ ತನ್ನ ಕಾಲದ ಸಾಮಾಜಿಕ ಜೀವನದಲ್ಲಿ ನೈತಿಕತೆ ಹೇಗೆ ಕ್ರಮೇಣ ಮಾಯವಾಗ ತೊಡಗಿತು ಎಂಬುದನ್ನು ತೋರಿಸಲು ಪ್ರಯತ್ನಿಸಿದ್ದಾನೆ. ನೈತಿಕತೆ ಮತ್ತು ರಾಜಕೀಯ ನೈಜ ಜಗತ್ತಿನಲ್ಲಿ ಎರಡು ಪ್ರತ್ಯೇಕ ಭಾಗಗಳು ಎಂದು ಅವನು ಚಿತ್ರಿಸಿದ್ದಾನೆ ಎಂದು ಖ್ಯಾತ ಸಂಸ್ಕೃತಿ ವಿಮರ್ಶಕ ಪ್ರೊ.ಎನ್. ಮನು ಚಕ್ರವರ್ತಿ ಹೇಳಿದರು. ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ಆಯೋಜಿಸಿದ್ದ “ಶೇಕ್ಸ್‌ಪಿಯರ್ ಜಗತ್ತು” ವಿಶೇಷ ಉಪನ್ಯಾಸದಲ್ಲಿ ಮಾತನಾಡಿದ ಅವರು, ಶೇಕ್ಸ್‌ಪಿಯರ್ ತನ್ನ ನಾಟಕಗಳಲ್ಲಿ ಒಳಸಂಚುಗಳು, […]