ಸೌದಿ ಅರಸನ ವಿರುದ್ದ ಅವಹೇಳನಕಾರಿ ಪೋಸ್ಟ್‌:ಕೋಟೇಶ್ವರ ಮೂಲದ ಯುವಕನ ವಿಚಾರಣೆ

ಕುಂದಾಪುರ: ಸೌದಿ ಅರಸನ ವಿರುದ್ದ ಅವಹೇಳನಕಾರಿ ಪೋಸ್ಟ್‌ವೊಂದನ್ನು ಶೇರ್ ಮಾಡಿದ ಆರೋಪದ ಮೇಲೆ ಇಲ್ಲಿನ ಕೋಟೇಶ್ವರ ಮೂಲದ ಯುವಕನೋರ್ವನನ್ನು ಸೌದಿ ಪೊಲೀಸರು ವಿಚಾರಣೆಗೆ ಕರೆದೊಯ್ದ ಘಟನೆ ಸೌದಿಅರೇಬಿಯಾದಲ್ಲಿ ನಡೆದಿದೆ. ಇಲ್ಲಿನ ಕೋಟೇಶ್ವರ ಸಮೀಪದ ಬೀಜಾಡಿ ನಿವಾಸಿ ಹರೀಶ್ ಬಂಗೇರ ಅವರನ್ನು ಸೌದಿ ಪೊಲೀಸರು ವಿಚಾರಣೆಗಾಗಿ ಕರೆದೊಯ್ದಿದ್ದಾರೆ. ಸೌದಿಅರೇಬಿಯಾದ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿರುವ ಹರೀಶ್ ಬಂಗೇರ ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಗೋಲಿಬಾರ್ ಹತ್ಯೆಯನ್ನು ಹರೀಶ್ ಬಂಗೇರ ಎಸ್ ಎನ್ನುವ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದರು. ಕೂಡಲೇ ಅಲ್ಲಿನ […]