ಸೌಜನ್ಯ ಪ್ರಕರಣ ಮರು ತನಿಖೆಗೆ ಒತ್ತಾಯಿಸಿ ದ.ಕ-ಉಡುಪಿ ಜಿಲ್ಲಾ ಬಿಜೆಪಿ ಶಾಸಕರಿಂದ ಮುಖ್ಯಮಂತ್ರಿಗಳಿಗೆ ಮನವಿ

ಮಂಗಳೂರು/ಉಡುಪಿ: ಸೌಜನ್ಯ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗವು ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿತು. ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಲು ರಾಜ್ಯ ಸರಕಾರಕ್ಕೆ ಕಾನೂನಿನಲ್ಲಿ ಅವಕಾಶವಿರುವುದಿಲ್ಲ. ಈ ವಿಷಯವನ್ನು ಸೌಜನ್ಯ ಪೋಷಕರಿಗೆ ನಾನು ತಿಳಿಸಿದ್ದೇನೆ. ಈಗಾಗಲೇ ಕಾನೂನು ಸಲಹೆಯನ್ನು ನಾನು ಪಡೆದಿರುವುದರಿಂದ ಸೌಜನ್ಯಳ ಪೋಷಕರು ಮೇಲ್ಮನವಿ ಸಲ್ಲಿಸಬಹುದು ಅಥವಾ ಸಿಬಿಐ ಮೇಲ್ಮನವಿ ಸಲ್ಲಿಸಲು ಅವಕಾಶವಿರುತ್ತದೆ. ನಿಯೋಗವು […]