ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ರಾಜ್ಯ ಸರಕಾರ ಮತ್ತು ಸಿಬಿಐಗೆ ಹೈಕೋರ್ಟ್ ನೋಟಿಸ್
ಬೆಂಗಳೂರು: ವಿದ್ಯಾರ್ಥಿನಿ ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸಲು ಆದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರಕಾರ ಮತ್ತು ಸಿಬಿಐಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಈ ಕುರಿತಂತೆ ಮೃತಳ ಸೌಜನ್ಯಳ ತಂದೆ ಚಂದಪ್ಪ ಗೌಡ ಸಲ್ಲಿಸಿದ್ದ ತಕರಾರು ಅರ್ಜಿ, ನ್ಯಾಯಮೂರ್ತಿ ಕೆ.ನಟರಾಜನ್ ಅವರ ನ್ಯಾಯಪೀಠದ ಮುಂದೆ ಇತ್ತೀಚೆಗೆ ವಿಚಾರಣೆಗೆ ಬಂದಿತ್ತು. ಕೆಲ ಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನಂತರ ಅರ್ಜಿಯಲ್ಲಿ ಪ್ರತಿವಾದಿಯಾಗಿರುವ ರಾಜ್ಯ ಗೃಹ ಇಲಾಖೆ […]
ಸೌಜನ್ಯ ಪ್ರಕರಣ ಮರುತನಿಖೆಗೆ ಒತ್ತಾಯಿಸಿ ಪ್ರಧಾನಿಗೆ ಪತ್ರ
ಹಿರೇಬೆಟ್ಟು: ಸೌಜನ್ಯ ಪ್ರಕರಣದಲ್ಲಿ ಸಂತ್ರಸ್ತೆಗೆ ನ್ಯಾಯ ಸಿಗಬೇಕು ಎನ್ನುವ ನಿಟ್ಟಿನಲ್ಲಿ ಹಲವಾರು ಸಮಯದಿಂದ ಹೋರಾಟ ನಡೆಯುತ್ತಿದ್ದು, ಹಿರೇಬೆಟ್ಟು ಸೌಜನ್ಯ ಹೋರಾಟ ಸಮಿತಿ ವತಿಯಿಂದ ಪ್ರತಿಭಟನಾ ಸಭೆ ನಡೆಯಿತು. ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ, ತಮ್ಮಣ್ಣ ಶೆಟ್ಟಿ ಹಾಗೂ ಸೌಜನ್ಯ ತಾಯಿ ಸಭೆಯಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಸೌಜನ್ಯ ಪ್ರಕರಣವನ್ನು ಮರು ತನಿಖೆ ನಡೆಸಿ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡುವಂತೆ ಮತ್ತು ಧರ್ಮಸ್ಥಳ ಪರಿಸರದಲ್ಲಿ ಇದುವರೆಗೆ ನಡೆದ ಎಲ್ಲಾ ಸರಣಿ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ವಿಸ್ತೃತ ತನಿಖೆ ನಡೆಸುವಂತೆ […]
ಒಂದು ಹೆಣ್ಣಿಗೆ ನ್ಯಾಯ ಕೊಡಬೇಕು ಎನ್ನುವ ತಿಮರೋಡಿಗೆ ಇನ್ನೊಂದು ಮಹಿಳೆಗೆ ಗೌರವ ಕೊಡುವ ಕನಿಷ್ಠ ಪರಿಜ್ಞಾನ ಇಲ್ಲವೇ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ಹೆಣ್ಣಿಗೆ ನ್ಯಾಯ ಕೊಡಬೇಕು ಎಂದು ಹೋರಾಟಕ್ಕೆ ಇಳಿದಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಮಹಿಳೆಗೆ ಗೌರವ ಕೊಡುವ ಕನಿಷ್ಠ ಪರಿಜ್ಞಾನ ಇಲ್ಲವೆ? ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪ್ರಶ್ನಿಸಿದ್ದಾರೆ. ಸೌಜನ್ಯಾ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಆ.29 ರಂದು ಉಡುಪಿಯ ಅಜ್ಜರಕಾಡು ಹುತಾತ್ಮ ಸೈನಿಕರ ಯುದ್ಧ ಸ್ಮಾರಕದ ಬಳಿ ನಡೆದ ಪ್ರತಿಭಟನಾ ಸಭೆಯಲ್ಲಿ ಕೇಂದ್ರ ಸಚಿವೆ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಸಹಿತ ಬಿಜೆಪಿ ಹಿರಿಯ ಮುಖಂಡರ ಬಗ್ಗೆ ಮಹೇಶ್ ಶೆಟ್ಟಿ ತಿಮರೋಡಿ […]
ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಉಡುಪಿಯಲ್ಲಿ ಬೃಹತ್ ಪ್ರತಿಭಟನೆ: ಸಹಸ್ರಾರು ಜನ ಭಾಗಿ
ಉಡುಪಿ: ಬೆಳ್ತಂಗಡಿಯ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವು ತೀವ್ರ ಸ್ವರೂಪದ ಪ್ರತಿಭಟನೆಯಲ್ಲಿ ಬದಲಾಗಿದ್ದು, ಉಡುಪಿಯಲ್ಲಿ ಮಂಗಳವಾರದಂದು ಬೃಹತ್ ಪ್ರತಿಭಟನೆ ನಡೆಯಿತು. ಅಜ್ಜರಕಾಡು ಹುತಾತ್ಮ ಸ್ಮಾರಕದ ಎದುರು ಸೌಜನ್ಯ ಹೋರಾಟ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು. ಪ್ರತಿಭಟನೆಗೂ ಮೊದಲು ಕೃಷ್ಣಮಠದಲ್ಲಿ ಪ್ರಾರ್ಥನೆ ಸಲ್ಲಿಸಿ ನಂತರ ಮೆರವಣಿಗೆಯಲ್ಲಿ ಘೋಷಣೆಗಳನ್ನು ಕೂಗುತ್ತಾ ಸಾಗಲಾಯಿತು. ಮಹೇಶ್ ಶೆಟ್ಟಿ ತಿಮರೋಡಿ, ಸೌಜನ್ಯ ತಾಯಿ ಕುಸುಮಾವತಿ ಹಾಗೂ ತಮ್ಮಣ್ಣ ಶೆಟ್ಟಿ ಭಾಗವಹಿಸಿ ಸೌಜನ್ಯ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆದು ಅಪರಾಧಿಗಳಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು. […]
ಇಂದು ಸೌಜನ್ಯ ಹೋರಾಟ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ: ಭಾಗವಹಿಸುವವರಿಗೆ ಉಚಿತ ಬಸ್ ವ್ಯವಸ್ಥೆ
ಉಡುಪಿ: ಇಂದು(ಆ. 29) ಅಜ್ಜರಕಾಡು ಹುತಾತ್ಮ ಸ್ಮಾರಕ ಬಳಿ ಸೌಜನ್ಯಳಿಗೆ ಆದ ಅನ್ಯಾಯದ ವಿರುದ್ದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಪ್ರತಿಭಟನೆಯಲ್ಲಿ ಭಾಗವಹಿಸುವವರಿಗೆ ಮಧ್ಯಾಹ್ನ 1.30 ಗಂಟೆಗೆ ಮೂಡುಬೆಳೆಯಿಂದ ಬಸ್ಸು ಹೊರಡುತ್ತದೆ. ಅನುಗ್ರಹ ಟ್ರಾವೆಲ್ಸ್ ಕಡೆಯಿಂದ ಮೂಡುಬೆಳ್ಳೆ ಯಿಂದ ಉಡುಪಿಗೆ ಹೊರಡುವವರಿಗೆ ಉಚಿತ ವಾಹನದ ವ್ಯವಸ್ಥೆ ಇದೆ. ಎಲ್ಲರೂ ಸದುಪಯೋಗಪಡಿಸಿಕೊಳ್ಳಿ ಒಂದಾಗಿ ಬನ್ನಿ ನ್ಯಾಯ ಕೇಳುವ ಮನಸುಗಳೆಲ್ಲ 2 ಗಂಟೆಗೆ ಹೀರೆಬೆಟ್ಟುವಿನಿಂದ ವಾಹನ ಹೊರಡುತ್ತದೆ. ವಿಶ್ವಶ್ರೀ ಟ್ರಾವೆಲ್ಸ್ ವತಿಯಿಂದ ಆತ್ರಾಡಿ ಹೀರೆಬೆಟ್ಟುವಿನಿಂದ ಉಡುಪಿಗೆ ಹೊರಡುವವರಿಗೆ ಉಚಿತ ವಾಹನದ ವ್ಯವಸ್ಥೆ ಇರುತ್ತದೆ. […]