ಉಡುಪಿ: ನಾಳೆ (ಆ. 29) ಸೌಜನ್ಯ ಹೋರಾಟ ಸಮಿತಿಯಿಂದ ಬೃಹತ್ ಪ್ರತಿಭಟನಾ ಸಭೆ
ಉಡುಪಿ: ಬೆಳ್ತಂಗಡಿಯ ಸೌಜನ್ಯ ಅತ್ಯಾಚಾರ ಮತ್ತು ಕೊಲೆಗೆ ಸಂಬಂಧಿಸಿ ಆಕೆಗೆ ನ್ಯಾಯ ಒದಗಿಸಲು ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಸೌಜನ್ಯ ಹೋರಾಟ ಸಮಿತಿ ಉಡುಪಿ ವತಿಯಿಂದ ಆ. 29 ರಂದು ಮಧ್ಯಾಹ್ನ 3 ಗಂಟೆಗೆ ಅಜ್ಜರಕಾಡಿನಲ್ಲಿ ಬೃಹತ್ ಪ್ರತಿಭಟನಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿಭಟನಾ ಸಭೆಯಲ್ಲಿ ಸೌಜನ್ಯ ಕುಟುಂಬ, ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ, ಚಿಂತಕ ತಮ್ಮಣ್ಣ ಶೆಟ್ಟಿ ಭಾಗವಹಿಸಲಿದ್ದಾರೆ. ಪ್ರತಿಭಟನೆಗೂ ಮುನ್ನ ಕೃಷ್ಣ ಮಠದಲ್ಲಿ ಪ್ರಾರ್ಥನೆ ಸಲ್ಲಿಸಿ ಪಾದಯಾತ್ರೆಯ ಮೂಲಕ ಅಜ್ಜರಕಾಡು ಹುತಾತ್ಮ ಸ್ಮಾರಕದವರೆಗೆ ಮೆರವಣಿಗೆ ನಡೆಯಲಿದೆ […]
ಕುಂದಾಪುರ: ಸೌಜನ್ಯ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ; ಸಹಸ್ರಾರು ಜನ ಭಾಗಿ
ಕುಂದಾಪುರ: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರರಣದ ಮರು ತನಿಖೆಗೆ ಆಗ್ರಹಿಸಿ ಕುಂದಾಪುರದಲ್ಲಿ ನಡೆದ ಪ್ರತಿಭಟನೆಯಲ್ಲಿ ಕುಂದಾಪುರ ಮತ್ತು ಬೈಂದೂರು ತಾಲೂಕಿನ ಸಾವಿರಾರು ಜನರು ಭಾಗವಹಿಸಿ ನ್ಯಾಯಕ್ಕಾಗಿ ಆಗ್ರಹಿಸಿದರು. ಜಸ್ಟಿಸ್ ಫಾರ್ ಸೌಜನ್ಯ ಎನ್ನುವ ಘೋಷಣೆಗಳನ್ನು ಕೂಗುತ್ತಾ ನೆಹರು ಮೈದಾನದಿಂದ ಹೊರಟು ಶಾಸ್ತ್ರಿ ಸರ್ಕಲ್ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಪ್ರತಿಭಟನಾ ಮೆರವಣಿಗೆಯಲ್ಲಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯಳ ಕುಟುಂಬಿಕರು ಭಾಗವಹಿಸಿದರು.
ಅಮರನಾಥದಲ್ಲಿ ವಿಹಿಂಪ ಹಾಗೂ ಬಜರಂಗದಳದಿಂದ ಸೌಜನ್ಯಳಿಗಾಗಿ ಪ್ರಾರ್ಥನೆ
ಶ್ರೀನಗರ: ಬೆಳ್ತಂಗಡಿಯ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನೈಜ ಆರೋಪಿಗಳಿಗೆ ಶಿಕ್ಷೆಯಾಗಿ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಪುತ್ತೂರಿನ ವಿಶ್ವ ಹಿಂದೂಪರಿಷತ್ ಹಾಗೂ ಬಜರಂಗದಳ ವತಿಯಿಂದ ಅಮರನಾಥದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಗನ್ ಮ್ಯಾನ್ ಒದಗಿಸಲು ಗೃಹ ಸಚಿವರಿಗೆ ಮನವಿ
ಬೆಳ್ತಂಗಡಿ: ಹನ್ನೊಂದು ವರ್ಷಗಳ ಹಿಂದೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೊಳಪಟ್ತು ಕೊಲೆಯಾದ ಕಾಲೇಜು ವಿದ್ಯಾರ್ಥಿನಿ ಕುಮಾರಿ ಸೌಜನ್ಯ ಗೌಡ ಪ್ರಕರಣದಲ್ಲಿ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿರುವ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಗನ್ ಮ್ಯಾನ್ ನೀಡುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಮಾಜಿ ಶಾಸಕ ವಸಂತ ಬಂಗೇರ ಮನವಿ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರನ್ನು ಭೇಟಿಯಾದ ಬಂಗೇರ, ರಾಜ್ಯದಲ್ಲಿ ಸೌಜನ್ಯ ಪರ ಹೋರಾಟ ತೀವ್ರ ಸ್ವರೂಪ ಪಡೆದಿದ್ದು, ಹೋರಾಟದ ಮುಂಚೂಣಿಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿಯವರಿಗೆ […]
ಸೌಜನ್ಯ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ಎಬಿವಿಪಿಯಿಂದ ಪೋಸ್ಟ್ ಕಾರ್ಡ್ ಚಳುವಳಿ
ಉಡುಪಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ವತಿಯಿಂದ ಕು. ಸೌಜನ್ಯ ಪ್ರಕರಣವನ್ನು ರಾಜ್ಯ ಸರ್ಕಾರ ಈ ಕೂಡಲೇ ಮರು ತನಿಖೆಗೆ ಆದೇಶಿಸಬೇಕು, ತನ್ಮೂಲಕ ನೈಜ ಅಪರಾಧಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿ ನಗರದ ವಿವಿಧ ಕಾಲೇಜು ಮತ್ತು ಹಾಸ್ಟೆಲ್ ಗಳಲ್ಲಿ ಪೋಸ್ಟ್ ಕಾರ್ಡ್ ಚಳುವಳಿಯನ್ನು ಆರಂಭಿಸಲಾಯಿತು. ಪೋಸ್ಟ್ ಕಾರ್ಡ್ ನ ಮೂಲಕ ರಾಜ್ಯದ ಮುಖ್ಯಸ್ಥರಾದ ರಾಜ್ಯಪಾಲರಿಗೆ, ಪ್ರಕರಣವನ್ನು ಮರು ತನಿಖೆಗೆ ಆದೇಶಿಸುವಂತೆ ಆಗ್ರಹಿಸಿ ಸುಮಾರು 400ಕ್ಕೂ ಅಧಿಕ ವಿದ್ಯಾರ್ಥಿಗಳ ಮೂಲಕ ಮನವಿಯನ್ನು ಮಾಡಲಾಯಿತು. ಎಬಿವಿಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ […]