ಸೌಜನ್ಯಾ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ದ.ಕ/ಉಡುಪಿ ಬಿಜೆಪಿ ಶಾಸಕರಿಂದ ಪ್ರತಿಭಟನೆ: ನಳಿನ್ ಕುಮಾರ್

ಮಂಗಳೂರು: ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆ ನಡೆಸುವಂತೆ ಆಗ್ರಹಿಸಿ ಆ. 27 ರಂದು ಬೆಳ್ತಂಗಡಿಯ ತಾಲೂಕು ಕಚೇರಿ ಮುಂಭಾಗದಲ್ಲಿ ದ.ಕ ಮತ್ತು ಉಡುಪಿ ಜಿಲ್ಲೆಯ ಶಾಸಕರಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಪ್ರತಿಭಟನೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಲಾಗುವುದು. ಸೌಜನ್ಯ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಲಾಗುವುದು ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಸೌಜನ್ಯ ಪ್ರಕರಣ ಹಳಿ ತಪ್ಪಿಸಿದವರು ಯಾರೆಂದು ಬಲ್ಲೆ; ರಹಸ್ಯ ಬಿಚ್ಚಿಟ್ಟರೆ ಸಾಯಿಸಬಹುದು: ವಸಂತ ಬಂಗೇರ

ಬೆಳ್ತಂಗಡಿ: ಸೌಜನ್ಯ ಪ್ರಕರಣದ ರಹಸ್ಯ ಬಿಚ್ಚಿಟ್ಟರೆ ನನ್ನನ್ನು ಸಾಯಿಸಬಹುದು. ಆದರೆ ಆ ರಹಸ್ಯವನ್ನು ಸಾಯುವ ಮುನ್ನ ನಾನು ಹೇಳದೇ ಬಿಡುವುದಿಲ್ಲ ಎಂದು ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಹೇಳಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಬೆಳ್ತಂಗಡಿಯ ಸೌಜನ್ಯ ಪ್ರಕರಣವನ್ನು ಉದ್ದೇಶಪೂರ್ವಕವಾಗಿ ದಾರಿ ತಪ್ಪಿಸಲಾಗಿದ್ದು ಇದರ ಹಿಂದೆ ಇರುವವರು ಯಾರೆಂದು ನನಗೆ ಗೊತ್ತಿದೆ ಎಂದರು. ನಾನು ಶಾಸಕನಾಗಿದ್ದಾಗ ಅಧಿವೇಶನದಲ್ಲಿ ಸೌಜನ್ಯಾ ಕೇಸ್ ಅನ್ನು ಸಿಬಿಐಗೆ ವಹಿಸಲು ಆಗ್ರಹಿಸಿದ್ದೆ. ಸಿದ್ದರಾಮಯ್ಯನವರು ಕೆಲವರನ್ನ ತುಂಬಾ ಒಳ್ಳೆಯವರು ಎಂದು ನಂಬಿದ್ದರು. ಅಧಿವೇಶನಕ್ಕೂ ಮುನ್ನ […]

ಬೆಳ್ತಂಗಡಿ: ಧರ್ಮಸ್ಥಳ ಕ್ಷೇತ್ರದ ಭಕ್ತರ ಪ್ರತಿಭಟನೆಯಲ್ಲಿ ಸೌಜನ್ಯಾ ಪೋಷಕರಿಗೆ ಹಲ್ಲೆ; ದೂರು ದಾಖಲು

ಬೆಳ್ತಂಗಡಿ:  ಉಜಿರೆಯಲ್ಲಿ ನಡೆದ ಧರ್ಮಸ್ಥಳ ಕ್ಷೇತ್ರದ ಭಕ್ತರ ಪ್ರತಿಭಟನೆಯಲ್ಲಿ ಸೌಜನ್ಯಾ ಪೋಷಕರ ಮೇಲೆ ಹಲ್ಲೆಗೆ ಯತ್ನಿಸಿದ ಬಗ್ಗೆ ದೂರು ದಾಖಲಾಗಿದೆ. ಅಪರಿಚಿತ ವ್ಯಕ್ತಿಗಳು ತನ್ನ ಮೈಗೆ ಕೈ ಹಾಕಿ ಮಾನಹಾನಿಗೆ ಯತ್ನಿಸಿದ್ದು ಹಾಗೂ ತನ್ನ ಮಗನಿಗೆ ಹಲ್ಲೆ ನಡೆಸಿದ ಬಗ್ಗೆ ಸೌಜನ್ಯ ತಾಯಿ ಕುಸುಮಾವತಿ (48) ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತನ್ನ ಮಗಳು ಸೌಜನ್ಯಾ 11 ವರ್ಷಗಳ ಹಿಂದೆ ಅತ್ಯಾಚಾರಕ್ಕೊಳಗಾಗಿ ಹತ್ಯೆಯಾಗಿದ್ದು, ಕೃತ್ಯದ ನೈಜ ಆರೋಪಿಗಳನ್ನು ಪತ್ತೆ ಹಚ್ಚಿ ಶಿಕ್ಷೆಗೊಳಪಡಿಸುವಂತೆ ನಾನು 11 ವರ್ಷದಿಂದ […]