ಗಾಂಜಾ ಪೆಡ್ಲರ್‌ಗಳ ಬಂಧನ: 75,000 ರೂ.ಮೌಲ್ಯದ 1.5 ಕೆ.ಜಿ. ಗಾಂಜಾ ವಶ

ಉಡುಪಿ: ವಿದ್ಯಾರ್ಥಿ ಸೇರಿದಂತೆ ಮೂವರು ಗಾಂಜಾ ಪೆಡ್ಲರ್‌ಗಳನ್ನು ಬಂಧಿಸಿ ಸುಮಾರು 75,000 ರೂ.ಮೌಲ್ಯದ 1.5 ಕೆ.ಜಿ. ಗಾಂಜಾ ವಶಪಡಿಸಿಕೊಂಡ ಘಟನೆ ಮಣಿಪಾಲದಲ್ಲಿ ಬುಧವಾರ ನಡೆದಿದೆ. ಹೆರ್ಗ ಗ್ರಾಮದ ಅಪಾರ್ಟ್‌ಮೆಂಟ್ ಮೇಲೆ ದಾಳಿ ಮಾಡಿ ಅಲ್ಲಿ ವಾಸವಾಗಿದ್ದ ವಿದ್ಯಾರ್ಥಿ ಶಶಾಂಕ (25) ಹಾಗೂ ಆತನ ಜತೆಗಿದ್ದ ಕಾರ್ಕಳದ ಪೆಡ್ಲರ್, ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿರುವ ಆದಿಲ್ (36)ನನ್ನು ಬಂಧಿಸಿ ಸುಮಾರು 300 ಗ್ರಾಂ ಗಾಂಜಾ ಜಪ್ತಿ ಮಾಡಲಾಗಿದೆ. ಅನಂತರ ಆದಿಲ್ ನೀಡಿದ ಮಾಹಿತಿಯ ಆಧಾರದ ಮೇಲೆ ಹಿರಿಯಡ್ಕ -ಕಾರ್ಕಳ […]

ಟಿಂಟ್ ಗ್ಲಾಸ್ ಮತ್ತು ಕರ್ಕಶ ಹಾರ್ನ್ ಹಾಕುವವರ ವಿರುದ್ದ ಕಠಿಣ ಕ್ರಮ: ಅಕ್ಷಯ್ ಮಚ್ಚೀಂದ್ರ

ಉಡುಪಿ: ಉಡುಪಿ ಹಾಗೂ ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಒಟ್ಟು 33 ಕಾರುಗಳ ಟಿಂಟ್ ಗ್ಲಾಸ್ ಗಳನ್ನು ಮತ್ತು 21 ವಾಹನಗಳ ಕರ್ಕಶ ಹಾರ್ನ್ ಗಳನ್ನು ತೆರವುಗೊಳಿಸಿದರು. ಟಿಂಟ್ ಗ್ಲಾಸ್ ಮತ್ತು ಕರ್ಕಶ ಹಾರ್ನ್ ಹಾಕಿದವರು ಕೂಡಲೆ ತೆರವುಗೊಳಿಸಬೇಕು ಇಲ್ಲವಾದಲ್ಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ ತಿಳಿಸಿದ್ದಾರೆ. ಅಲ್ಲದೆ, ದ್ವಿಚಕ್ರ ವಾಹನಗಳಲ್ಲಿ ಡಿಫೆಕ್ಟಿವ್ ಸೈಲೆನ್ಸರ್ ಗಳನ್ನು ಅಳವಡಿಸಿ ಕರ್ಕಶ ಶಬ್ದ ಮಾಡಿ […]

ಕೋಟ: ನಿಶಾಚರಿ ಕಳ್ಳರ ಬಂಧನ; 15 ಲಕ್ಷ ರೂ ಮೌಲ್ಯದ ಚಿನ್ನಾಭರಣ ಸಹಿತ ವಾಹನ ವಶ

ಕೋಟ: ರಾತ್ರಿ ಹೊತ್ತು ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿ ಕೋಟ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ 15 ಲಕ್ಷ ರೂ. ಮೌಲ್ಯದ ಬೆಲೆ ಬಾಳುವ ಚಿನ್ನಾಭರಣ ಹಾಗೂ 3 ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಕಾಪು ಎಲ್ಲೂರು ನಿವಾಸಿ ರಾಜೇಶ್ ದೇವಾಡಿಗ (38) ಮತ್ತು ಕಾರ್ಕಳ ಹೊಸ್ಮಾರು ಈದು ನಿವಾಸಿ ಮೊಹಮ್ಮದ್ ರಿಯಾಜ್ ಹೊಸ್ಮಾರ್ ಯಾನೆ ರಿಯಾಜ್ (39) ಎಂದು ಗುರುತಿಸಲಾಗಿದೆ. ಬ್ರಹ್ಮಾವರ ವೃತ್ತದ ಕೋಟ ಠಾಣಾ ವ್ಯಾಪ್ತಿಯ ಬ್ರಹ್ಮಾವರ ತಾಲೂಕು ಪಾಂಡೇಶ್ವರ ಗ್ರಾಮದ ಮಠದ ತೋಟ […]

ಸಾಮಾಜಿಕ ಜಾಲ ತಾಣಗಳಲ್ಲಿ ಮಕ್ಕಳ ಕಳ್ಳರ ಬಗ್ಗೆ ಸುಳ್ಳು ಸುದ್ದಿ ಹರಡಿದಲ್ಲಿ ಕ್ರಮ: ಅಕ್ಷಯ್ ಹಾಕೆ

ಉಡುಪಿ: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಕಳ್ಳರು ಬಂದಿರುತ್ತಾರೆ ಎಂಬ ಬಗ್ಗೆ ಸುಳ್ಳು ಸುದ್ದಿ ಹರಿದಾಡುತ್ತಿದ್ದು ಈ ವಿಷಯಕ್ಕೆ ಸಂಬಂಧಿಸಿದಂತೆ ಬೇರೆ ಬೇರೆ ದೇಶದ/ರಾಜ್ಯದ ವಿಡಿಯೋಗಳನ್ನು ಪ್ರಕಟಿಸಲಾಗುತ್ತಿದೆ. ಇದರಿಂದ ಆತಂಕಗೊಂಡ ಸಾರ್ವಜನಿಕರು ಅಪರಿಚಿತ ಅಮಾಯಕ ವ್ಯಕ್ತಿಗಳನ್ನು ತಡೆದು ಹಲ್ಲೆ ಮಾಡುವ ಘಟನೆಗಳು ಬೆಳಕಿಗೆ ಬಂದಿರುತ್ತದೆ. ಸಾರ್ವಜನಿಕರು ತಮ್ಮ ನಗರ/ ಗ್ರಾಮ /ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಯಾವುದೇ ಸಂಶಯಾಸ್ಪದ ವ್ಯಕ್ತಿಗಳು ಕಂಡು ಬಂದ ಕೂಡಲೇ 112 ಸಹಾಯವಾಣಿಗೆ ಕರೆ ಮಾಡಿದಲ್ಲಿ ಪೊಲೀಸರು ಕೊಡಲೇ ಘಟನಾ ಸ್ಥಳಕ್ಕೆ ಬಂದು […]