ಉಡುಪಿ ಎಸ್ ಪಿ ಫೋನ್ ಕಾರ್ಯಕ್ರಮ :ಸಾರ್ವಜನಿಕರಿಂದ ಸಮಸ್ಯೆಗಳ ದೊಡ್ಡ ಪಟ್ಟಿ
ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಅಂಬಲಪಾಡಿ, ಕಟಪಾಡಿ ಹಾಗೂ ಸಂತೆಕಟ್ಟೆ ಜಂಕ್ಷನ್ ನಲ್ಲಿ ಟ್ರಾಫಿಕ್ ಸಿಗ್ನಲ್ ಅಳವಡಿಸುವಂತೆ ಕೋರಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಹೇಳಿದರು. ಅವರು ಶುಕ್ರವಾರ ಉಡುಪಿ ಎಸ್ಪಿ ಕಚೇರಿಯಲ್ಲಿ ನಡೆದ ಫೋನ್ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಕರೆಗಳನ್ನು ಆಲಿಸಿ ಮಾತನಾಡಿದರು. ಟ್ರಾಫಿಕ್ ಸಿಗ್ನಲ್ ಅಳವಡಿಸಲು ಅವಕಾಶ: ರಾ.ಹೆ.66ರ ಈ ಮೂರು ಜಂಕ್ಷನ್ ಗಳಲ್ಲಿ ತುಂಬಾ ಟ್ರಾಫಿಕ್ ಸಮಸ್ಯೆ ಉಂಟಾಗುತ್ತದೆ. ಸರ್ವಿಸ್ ರಸ್ತೆಯಲ್ಲಿ ದ್ವಿಪಥ […]