ಸಂಚಾರಿ ಪೋಲೀಸ್ ಮತ್ತು ಚಾಲಕರಿಗೆ ತುರ್ತು ಪರಿಸ್ಥಿತಿ ಪ್ರಥಮ ಪ್ರತಿಕ್ರಿಯೆ ತರಬೇತಿ ಕಾರ್ಯಾಗಾರ
ಮಣಿಪಾಲ: ಉಡುಪಿ ಜಿಲ್ಲಾ ಪೊಲೀಸ್, ಸೆಂಟರ್ ಫಾರ್ ಕ್ಲಿನಿಕಲ್ ಮತ್ತು ಇನ್ನೋವೇಟಿವ್ ಫೋರೆನ್ಸಿಕ್ಸ್ (CCIF) ಮತ್ತು ಕೆಎಂಸಿ ಮಣಿಪಾಲದ ತುರ್ತು ವೈದ್ಯಕೀಯ ವಿಭಾಗದ ಸಹಯೋಗದೊಂದಿಗೆ ಟ್ರಾಫಿಕ್ ಪೊಲೀಸ್ ಮತ್ತು ಚಾಲಕರಿಗೆ ಪ್ರಥಮ ಪ್ರತಿಕ್ರಿಯೆ ನೀಡುವುದರ ಬಗ್ಗೆ ತರಬೇತಿ ಕಾರ್ಯಾಗಾರವನ್ನು ಮೇ . 30 ರಂದು ಡಾ. ಟಿಎಂಎ ಪೈ ಹಾಲ್ ನಲ್ಲಿ ಆಯೋಜಿಸಲಾಯಿತು. ಮುಖ್ಯ ಅತಿಥಿಯಾಗಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹಾಕೆ ಅಕ್ಷಯ್ ಮಚ್ಚಿಂದ್ರ ಭಾಗವಹಿಸಿ ಮಾತನಾಡಿ, ರಸ್ತೆ ಸುರಕ್ಷತೆಯನ್ನು ಹೆಚ್ಚಿಸುವಲ್ಲಿ ಮತ್ತು ತುರ್ತು ಸಂದರ್ಭಗಳಲ್ಲಿ […]
ಟಿಂಟ್ ಗ್ಲಾಸ್ ಮತ್ತು ಕರ್ಕಶ ಹಾರ್ನ್ ಹಾಕುವವರ ವಿರುದ್ದ ಕಠಿಣ ಕ್ರಮ: ಅಕ್ಷಯ್ ಮಚ್ಚೀಂದ್ರ
ಉಡುಪಿ: ಉಡುಪಿ ಹಾಗೂ ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಒಟ್ಟು 33 ಕಾರುಗಳ ಟಿಂಟ್ ಗ್ಲಾಸ್ ಗಳನ್ನು ಮತ್ತು 21 ವಾಹನಗಳ ಕರ್ಕಶ ಹಾರ್ನ್ ಗಳನ್ನು ತೆರವುಗೊಳಿಸಿದರು. ಟಿಂಟ್ ಗ್ಲಾಸ್ ಮತ್ತು ಕರ್ಕಶ ಹಾರ್ನ್ ಹಾಕಿದವರು ಕೂಡಲೆ ತೆರವುಗೊಳಿಸಬೇಕು ಇಲ್ಲವಾದಲ್ಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ ತಿಳಿಸಿದ್ದಾರೆ. ಅಲ್ಲದೆ, ದ್ವಿಚಕ್ರ ವಾಹನಗಳಲ್ಲಿ ಡಿಫೆಕ್ಟಿವ್ ಸೈಲೆನ್ಸರ್ ಗಳನ್ನು ಅಳವಡಿಸಿ ಕರ್ಕಶ ಶಬ್ದ ಮಾಡಿ […]
ಮಣಿಪಾಲ: ನಿಷೇಧಿತ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ
ಮಣಿಪಾಲ: ಶಿವಳ್ಳಿ ಗ್ರಾಮದ ಇಂದಿರಾ ಶಿವರಾಮ್ ಪಾಲಿಟೆಕ್ನಿಕ್ ಕಾಲೇಜಿನ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಉಡುಪಿ ಸೆನ್ ಮತ್ತು ಪಿಐ ಪೊಲೀಸ್ ತಂಡವು ಎ.2 ರಂದು ಬಂಧಿಸಿದ್ದಾರೆ. ಬಂಧಿತನಿಂದ 2.110 ಕೆಜಿ ಗಾಂಜಾ ಹಾಗೂ 1 ಮೊಬೈಲನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ಪಿ ಅಕ್ಷಯ್ ಹಾಕೆ ತಿಳಿಸಿದ್ದಾರೆ.
ಉಡುಪಿ: ಹೊಸ ವರ್ಷಾಚರಣೆಗೆ ಕಡ್ಡಾಯ ನಿಯಮ; ಪೊಲೀಸ್ ಇಲಾಖೆಯಿಂದ ಸಾರ್ವಜನಿಕರಿಗೆ ಮಾರ್ಗಸೂಚಿ
ಉಡುಪಿ: ಇನ್ನೇನು 2022 ಕ್ಕೆ ವಿದಾಯ ಹೇಳಲಿದ್ದು, 2023 ನೇ ವರ್ಷವನ್ನು ಅದ್ದೂರಿಯಾಗಿ ಸ್ವಾಗತಿಸಬೇಕೆಂದಿದ್ದ ಜನರಿಗೆ ಕೋವಿಡ್ ಮತ್ತೊಮ್ಮೆ ಆಘಾತವನ್ನುಂಟು ಮಾಡಿದೆ. ಜಗತ್ತಿನಾದ್ಯಂತ ಕೋವಿಡ್ ಬಗ್ಗೆ ಹೆಚ್ಚಿರುವ ಆತಂಕದಿಂದಾಗಿ ಭಾರತದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹೊಸ ವರ್ಷಾಚರಣೆಯ ಸಂಭ್ರಮಗಳನ್ನು ಜನವರಿ ಮಧ್ಯರಾತ್ರಿ 1 ಗಂಟೆಯೊಳಗೆ ಮುಕ್ತಾಯಗೊಳಿಸುವಂತೆ ರಾಜ್ಯ ಸರ್ಕಾರವು ಈಗಾಗಲೇ ಸೂಚನೆ ನೀಡಿದ್ದು, ಅದರಂತೆ ಉಡುಪಿ ಜಿಲ್ಲೆಯಲ್ಲಿಯೂ ಸಾರ್ವಜನಿಕರಿಗೆ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಇಲಾಖೆಯಿಂದ ಸಾರ್ವಜನಿಕರಿಗೆ ಮಾರ್ಗಸೂಚಿಗಳು: ಹೊಸ ವರ್ಷದ ಸಂಭ್ರಮಾಚರಣೆಗಳನ್ನು ಜನವರಿ 1 ರ ಮಧ್ಯರಾತ್ರಿಯೊಳಗೆ ಮುಕ್ತಾಯಗೊಳಿಸಬೇಕು. […]