ಉಡುಪಿ-ಬ್ರಹ್ಮಾವರ ವ್ಯಾಪ್ತಿ ಕಳವು ಪ್ರಕರಣ ಬೇಧಿಸಿದ ಪೊಲೀಸರು: ಆರೋಪಿಗಳ ಬಂಧನ; ಚಿನ್ನಾಭರಣ ವಶ

ಬ್ರಹ್ಮಾವರ: ಬ್ರಹ್ಮಾವರ ಮತ್ತು ಕೋಟಾ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಬ್ರಹ್ಮಾವರ ಸಿಪಿಐರವರ ವಿಶೇಷ ತಂಡ ಯಶಸ್ವಿಯಾಗಿದೆ. ಆರೋಪಿಯಿಂದ 7 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಸ್ವತ್ತನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ರಾತ್ರಿ ಸಮಯದಲ್ಲಿ ಮನೆಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿದ್ದ ಕಾದೂರು ತಂತ್ರಾಡಿಯ ವಿಜಯ್ ಕುಮಾರ್ ಶೆಟ್ಟಿಯನ್ನು ಬಂಧಿಸಲಾಗಿದೆ. ಜೈಲಿನಿಂದ ಬಿಡುಗಡೆಯಾದ ಕಳ್ಳತನದ ಆರೋಪಿಗಳ ಮಾಹಿತಿಯನ್ನು ಕಲೆಹಾಕಿ ಎಲ್ಲರ ಮೇಲೆ ನಿಗಾ ಇರಿಸಲಾಗಿತ್ತು. ಸೋಮವಾರದಂದು ಸಂಜೆ ನೀಲಾವರ ಕ್ರಾಸ್ ಬಳಿ ಆರೋಪಿ […]

ವರ್ಗಾವಣೆಗೊಂಡ ಚಿಕ್ಕಮಗಳೂರು ಪೊಲೀಸ್ ಅಧೀಕ್ಷಕಿ ಶೃತಿ ಬೀಳ್ಕೊಡಿಗೆ

ಚಿಕ್ಕಮಗಳೂರು: ಪೊಲೀಸ್ ಇಲಾಖೆಯಲ್ಲಿ ದಕ್ಷ ಹಾಗೂ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ ಹೆಚ್ಚುವರಿ ಪೊಲೀಸ್ ಅಧೀಕ್ಷಕಿ ಎನ್.ಎಸ್.ಶೃತಿ ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ ವಿವಿಧ ಪಕ್ಷದ ಮುಖಂಡರು ಹಾಜರಿದ್ದರು. ಗೌರವ ಸ್ವೀಕರಿಸಿ ಮಾತನಾಡಿದ ಶೃತಿ, ಜಿಲ್ಲೆಯು ಶಾಂತಿಪ್ರಿಯವಾಗಿದ್ದು ಇಲ್ಲಿ ಸುಮಾರು ಮೂರು ವರ್ಷಕ್ಕೂ ಹೆಚ್ಚಿನ ಅವಧಿಯಿಂದ ಕರ್ತವ್ಯ ನಿರ್ವಹಿಸುತ್ತಿರುವುದು ಖುಷಿ ತಂದಿದೆ. ಹಿಂದೂ-ಮುಸ್ಲಿಂ ಸಮುದಾಯದವರು ಜಿಲ್ಲೆಯಲ್ಲಿ ಉತ್ತಮ ಬಾಂಧವ್ಯ ಹೊಂದಿರುವುದು ಹೆಮ್ಮೆ ತಂದಿದೆ ಎಂದರು. ಕೆಪಿಸಿಸಿ ರಾಜ್ಯ ವಕ್ತಾರ ಹೆಚ್.ಹೆಚ್.ದೇವರಾಜ್ ಮಾತನಾಡಿ, ಪೊಲೀಸ್ ಅಧೀಕ್ಷಕಿ ಶೃತಿ […]

ನಿಯಮ ಉಲ್ಲಂಘನೆ ವಾಹನ ಚಾಲಕರ ಲೈಸೆನ್ಸ್ ರದ್ದತಿಗೆ ಪ್ರಸ್ಥಾವನೆ,  ಸರಕು ಸಾಗಾಟ ವಾಹನದಲ್ಲಿ ಮಾನವ ಸಾಗಾಟ

ಉಡುಪಿ: ಜಿಲ್ಲೆಯಲ್ಲಿ ಕಾನೂನು ಉಲ್ಲಂಘಿಸಿ ಶಾಲಾ ಮಕ್ಕಳನ್ನು ಸಾಗಿಸುತಿದ್ದ 51 ಶಾಲಾ ವಾಹನ, ಮಾನವರನ್ನು ಸಾಗಿಸುತಿದ್ದ 100 ಸರಕು ಸಾಗಾಟ ವಾಹನಗಳ ಮೇಲೆ ಕೇಸು ದಾಖಲಿಸಿ ದಂಡ ವಿಧಿಸಲಾಗಿದ್ದು, ಮೂರು ತಿಂಗಳಮಟ್ಟಿಗೆ ಚಾಲಕರ ಪರವಾನಿಗೆ ಲೈಸೆನ್ಸ್ ರದ್ಧತಿಗೆ ಆರ್‌ಟಿಒಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕಿ ನಿಶಾ ಜೇಮ್ಸ್ ತಿಳಿಸಿದ್ದಾರೆ. ಶುಕ್ರವಾರ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ನಡೆದ ಎಸ್‌ಪಿ ಫೋನ್ ಇನ್ ಕಾರ್ಯಕ್ರಮದಲ್ಲಿ ಈ ಕುರಿತು ಸಾರ್ವಜನಿಕರು‌ ಮನವಿ ಮಾಡಿದರು. ರಿಕ್ಷಾದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ […]

ಮಹಿಳೆ ಅನುಮಾನಾಸ್ಪದ ಸಾವು: ತೀವ್ರಗೊಂಡ ಪೊಲೀಸ್ ತನಿಖೆ ಘಟನಾ, ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್ ಭೇಟಿ, ಪರಿಶೀಲನೆ

ಕುಂದಾಪುರ: ಇಲ್ಲಿನ ಹೆಮ್ಮಾಡಿಯ ಹರೆಗೋಡು ಸಮೀಪದ ವಿಜಯ ಗೇರುಬೀಜ ಕಾರ್ಖಾನೆ ಸಮೀಪದ ಮನೆಯಲ್ಲಿ ವಾಸವಿದ್ದ ಮೀನು ಮಾರಾಟದ ಮಹಿಳೆ ಗುಲಾಬಿ(55) ಎಂಬವರ ಅನುಮಾನಾಸ್ಪದ ಸಾವಿನ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದು, ಘಟನಾ ಸ್ಥಳಕ್ಕೆ ಭಾನುವಾರ ಸಂಜೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತ ಮಹಿಳೆ ಮನೆಗೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್ ಪರಿಶೀಲನೆ ನಡೆಸಿ, ಅಧಿಕಾರಿಗಳ ಜೊತೆ ಮಾಹಿತಿ ಪಡೆದಿದ್ದು, ಮುಂದಿನ ತನಿಖೆ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ […]

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಎಸ್‌ಪಿಯಾಗಿ ಬಿ.ಎಂ.ಲಕ್ಷ್ಮೀಪ್ರಸಾದ್ ನೇಮಕ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಎಸ್‌ಪಿಯನ್ನಾಗಿ  ಬಿ.ಎಂ.ಲಕ್ಷ್ಮೀಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಎಸ್‌ಪಿ ದರ್ಜೆಯಲ್ಲಿದ್ದ ರವಿಕಾಂತೇಗೌಡ ಅವರಿಗೂ ಬಡ್ತಿ ದೊರಕಿದ್ದು, ಅವರನ್ನು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಡಿಐಜಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಎಂಜಿನಿಯರಿಂಗ್‌ ಪದವೀಧರರಾ ಗಿರುವ ಲಕ್ಷ್ಮೀಪ್ರಸಾದ್‌, 2014ರಲ್ಲಿ ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ ಐಪಿಎಸ್‌ ಅಧಿಕಾರಿಯಾಗಿ ಆಯ್ಕೆಯಾಗಿದ್ದರು. ಬಾಗಲಕೋಟೆ ಸಹಾಯಕ ಎಸ್‌ಪಿ, ವಿಜಯಪುರ ಮತ್ತು ನಕ್ಸಲ್‌ ನಿಗ್ರಹ ಪಡೆ ಎಸ್‌ಪಿ ಹುದ್ದೆಯಲ್ಲಿ ಕೆಲಸ ಮಾಡಿದ ಇವರು, ಪ್ರಸ್ತುತ ಆಂತರಿಕ ಭದ್ರತಾ ವಿಭಾಗದ ಭಯೋತ್ಪದನಾ ತಡೆ ಕೇಂದ್ರದ […]