ಇಂದು ಸ್ಪಂದನಾ ಅಂತ್ಯಕ್ರಿಯೆ; ಮಧ್ಯಾಹ್ನದವರೆಗೂ ಅಂತಿಮ ದರ್ಶನಕ್ಕೆ ಅವಕಾಶ
ಬೆಂಗಳೂರು: ಬ್ಯಾಂಕಾಕ್ ನಲ್ಲಿ ಹೃದಯಾಘಾತದಿಂದ ಮೃತಪಟ್ಟ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಪಾರ್ಥಿವ ಶರೀರದ ಅಂತಿಮ ದರ್ಶನ ನಡೆಯುತ್ತಿದ್ದು, ಇಂದು ಮಧ್ಯಾಹ್ನ ಹರಿಶ್ಚಂದ್ರ ಘಾಟ್ ನಲ್ಲಿ ಸ್ಪಂದನಾ ಅಂತ್ಯಕ್ರಿಯೆ ನಡೆಯಲಿದೆ. ಸ್ಪಂದನಾ ತಂದೆ ಬಿ. ಕೆ. ಶಿವರಾಮ್ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಹಲವರು ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ. ಇಂದು ಮಧ್ಯಾಹ್ನ 2 ಗಂಟೆವರೆಗೂ ಅಂತಿಮ ದರ್ಶನದ ವ್ಯವಸ್ಥೆ ಇರಲಿದೆ.