ವಿಶೇಷ ಉಪನ್ಯಾಸ ಮಾಲೆ ಕಾರ್ಯಾಗಾರ:ವಿದ್ಯಾರ್ಥಿಗಳಿಗೆ ಭಾಗವಹಿಸಲು ಅವಕಾಶ

ಉಡುಪಿ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು 2007 ರಿಂದ ವಿವಿಧ ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ವಿಜ್ಞಾನ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ಮಾಲೆ ಕಾರ್ಯಕ್ರಮವನ್ನು ಆಯೋಜಿಸಿಕೊಂಡು ಬರುತ್ತಿದೆ. ಪ್ರಸಕ್ತ ವರ್ಷ ಅಗಸ್ಟ್ 27 ರಿಂದ 29 ರವರೆಗೆ 3 ದಿನಗಳ ವಿಶೇಷ ಉಪನ್ಯಾಸ ಮಾಲೆ ಕಾರ್ಯಾಗಾರವನ್ನು ಇಸ್ರೋ ಸಂಸ್ಥೆಯ ಪ್ರಾದೇಶಿಕ ಕೇಂದ್ರದ ಸಹಯೋಗದೊಂದಿಗೆ ಆಯೋಜಿಸಲಾಗುತ್ತದೆ. ಈ ಕಾರ್ಯಾಗಾರದಲ್ಲಿ ವಿವಿಧ ವಿಶ್ವವಿದ್ಯಾನಿಲಯಗಳ ವಿಜ್ಞಾನ ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಲು ಅವಕಾಶ ಕಲ್ಪಿಸಲಾಗಿದ್ದು,ತಂತ್ರಜ್ಞಾನಕ್ಕೆ ಸಂಬಂಧಿಸಿದ ವಿಶೇಷ ಉಪನ್ಯಾಸಗಳನ್ನು ನುರಿತ ತಜ್ಞರಿಂದ ಏರ್ಪಡಿಸಲಾಗಿದೆ. […]