ಪ್ರವಾಸೋದ್ಯಮ ನೀತಿಯಲ್ಲಿ ಕರಾವಳಿಗೆ ವಿಶೇಷ ಒತ್ತು: ಸಿಎಂ ಬೊಮ್ಮಾಯಿ
ಉಡುಪಿ: ರಾಜ್ಯ ಸರ್ಕಾರ ರೂಪಿಸುತ್ತಿರುವ ಪ್ರವಾಸೋದ್ಯಮ ನೀತಿಯಲ್ಲಿ ಕರಾವಳಿ ಪ್ರವಾಸೋದ್ಯಮಕ್ಕೆ ವಿಶೇಷ ಒತ್ತು ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಅವರು, ಉಡುಪಿ ಕುಂತಲ ನಗರದಲ್ಲಿ ಇಂದು ಉದ್ಯಮಿಗಳೊಂದಿಗೆ ನಡೆಸಿದ ಚಾಯ್ ಪೆ ಚರ್ಚಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಉದ್ಯೋಗ ಆಧಾರಿತ ಪ್ರೋತ್ಸಾಹ ನೀತಿಯನ್ನು ಜಾರಿಗೊಳಿಸಲು ಹಾಗೂ ಯುವ ಉದ್ಯಮಿಗಳಿಗೆ ಉದ್ಯಮ ಸ್ಥಾಪಿಸಲು ಪೂರಕವಾದ ವಾತಾವರಣ ಸೃಷ್ಟಿಸಲಾಗುವುದು ಎಂದರು.