ಹೆಮ್ಮಾಡಿ: ಜನತಾ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ-ಖೇಲೋ ಜನತಾ 2023
ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಖೇಲೋ ಜನತಾ ವಾರ್ಷಿಕ ಕ್ರೀಡಾಕೂಟ 2023 ಅನ್ನು ಆಯೋಜಿಸಲಾಯಿತು.ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಗಣೇಶ್ ಮೊಗವೀರ ಇವರು ವಹಿಸಿ ಪ್ರಾಸ್ತಾವಿಕವಾಗಿ ಕಾಲೇಜಿನ ಕ್ರೀಡಾ ಚಟುವಟಿಕೆಗಳ ಕುರಿತು ಮಾತನಾಡಿದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಉಪ್ಪುಂದ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ದೈಹಿಕ ಶಿಕ್ಷಣ ಶಿಕ್ಷಕಮಂಜುನಾಥ್ ಶೆಟ್ಟಿ ಗೌರವ ರಕ್ಷೆ ಸ್ವೀಕರಿಸಿ, ಕ್ರೀಡಾಜ್ಯೋತಿಯನ್ನು ಬೆಳಗಿಸಿ ವಿದ್ಯಾರ್ಥಿಗಳ ಪ್ರತಿಭೆಗಳಿಗೆ ಕ್ರೀಡಾಕೂಟಗಳು ಅದ್ಭುತವಾದ ವೇದಿಕೆಯಾಗಿದೆ ಎಂದು ಜನತಾ ಪದವಿ ಪೂರ್ವ ಕಾಲೇಜಿನ ಕ್ರೀಡಾ […]