ಪೊಲೀಸರ ಒತ್ತಡ ನಿವಾರಣೆಗೆ ಕ್ರೀಡೆ ಅಗತ್ಯ: ಜಿಲ್ಲಾಧಿಕಾರಿ ಕೂರ್ಮರಾವ್ ಎಂ

ಉಡುಪಿ: ಸಾರ್ವಜನಿಕರ ಸೇವೆಯಲ್ಲಿ ಪ್ರತಿದಿನ ಒತ್ತಡದಲ್ಲಿ ಕಾರ್ಯನಿರ್ವಹಿಸುವ ಪೊಲೀಸ್ ಸಿಬ್ಬಂದಿಗೆ ಒತ್ತಡ ನಿವಾರಣೆಗೆ ಹಾಗೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದು ಅತ್ಯಂತ ಮುಖ್ಯವಾದುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಅಜ್ಜರಕಾಡು ಮಹಾತ್ಮ ಗಾಂಧೀ ಕ್ರೀಡಾಂಗಣದಲ್ಲಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು. ಪೊಲೀಸರು ಪ್ರತಿದಿನ ಯಾವುದಾದರೊಂದು ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಕೊಳ್ಳುವುದರಿಂದ, ಕರ್ತವ್ಯದ ಅವಧಿಯಲ್ಲಿ ಹೆಚ್ಚಿನ ಉತ್ಸಾಹದಿಂದ ಕಾರ್ಯನಿರ್ವಹಿಸಲು ಸಾಧ್ಯವಾಗುವುದರ ಜೊತೆಗೆ ಒತ್ತಡ ರಹಿತ, ಆರೋಗ್ಯಕರ ಜೀವ ನಡೆಸಲು ಸಾಧ್ಯವಾಗಲಿದೆ. […]