ಚೊಚ್ಚಲ ಬಾರಿಗೆ ಸೆಮೀಸ್‌ಗೇರಿದ ಬೆಲಾರಸ್‌ ಪ್ರತಿಭೆ: ಫ್ರೆಂಚ್ ಓಪನ್ ಮಹಿಳೆಯರ ಸಿಂಗಲ್ಸ್‌

ಪ್ಯಾರಿಸ್‌: ಫ್ರೆಂಚ್ ಓಪನ್ ಮಹಿಳಾ ಸಿಂಗಲ್ಸ್​ನಲ್ಲಿ ಬೆಲಾರಸ್‌ನ ಅರೀನಾ ಸಬಲೆಂಕಾ 6-4, 6-4ರ ನೇರ ಸೆಟ್‌ಗಳಿಂದ ಉಕ್ರೇನ್‌ನ ಎಲಿನಾ ಸ್ವಿಟೋಲಿನಾ ಅವರನ್ನು ಮಣಿಸಿದರು. ಮಂಗಳವಾರ ನಡೆದ ಮಹಿಳೆಯರ ಸಿಂಗಲ್ಸ್​ ವಿಭಾಗದ ಪಂದ್ಯದಲ್ಲಿ ವಿಶ್ವದ ಎರಡನೇ ಶ್ರೇಯಾಂಕದ ಆಟಗಾರ್ತಿ ಬೆಲಾರಸ್‌ನ ಅರೀನಾ ಸಬಲೆಂಕಾ ಅವರು ಉಕ್ರೇನ್‌ನ ಎಲಿನಾ ಸ್ವಿಟೋಲಿನಾ ಅವರನ್ನು 6-4, 6-4 ಸೆಟ್‌ಗಳಿಂದ ಸೋಲಿಸಿ ಫ್ರೆಂಚ್ ಓಪನ್ ಸೆಮಿಫೈನಲ್ ತಲುಪಿದರು. ಸಬಲೆಂಕಾ ಸೆಮಿಫೈನಲ್​ನಲ್ಲಿ ಝೆಕ್ ಕರೋಲಿನಾ ಮುಚೋವಾ ಅವರನ್ನು ಎದುರಿಸಲಿದ್ದಾರೆ. ಈ ಪಂದ್ಯ ಹೆಚ್ಚು ಆಕರ್ಷಣೆಗೆ ಕಾರಣವಾಗಿತ್ತು. […]