ಸೆಪ್ಟಂಬರ್ 3 ರಂದು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಆಯೋಜನೆ
ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಸೆಪ್ಟಂಬರ್ 3 ರಂದು ಉಡುಪಿಯ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣ, ಕುಂದಾಪುರ ಹಾಗೂ ಕಾರ್ಕಳದ ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ. ಸ್ಪರ್ಧೆಗಳ ವಿವರ: ಪುರುಷರಿಗೆ: 100ಮೀ, 200ಮೀ, 400ಮೀ, 800ಮೀ, 1500ಮೀ, 5000ಮೀ ಓಟ, ಉದ್ದ ಜಿಗಿತ, ಎತ್ತರಜಿಗಿತ, ಗುಂಡೆಸೆತ, ಟ್ರಿಪಲ್ ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ, 110ಮೀ ಹರ್ಡಲ್ಸ್, 4*100ಮೀ ರಿಲೇ, 4*400ಮೀ […]
ಪ.ಜಾತಿ-ಪ. ಪಂಗಡದ ಪದಕ ವಿಜೇತ ಕ್ರೀಡಾ ಪಟುಗಳಿಗೆ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ
ಉಡುಪಿ: ಪ್ರಸಕ್ತ ಸಾಲಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯಡಿ ಜಿಲ್ಲೆಯಲ್ಲಿ 2021 ನೇ ಸಾಲಿನಲ್ಲಿ ರಾಜ್ಯ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪಂಗಡದ ಕ್ರೀಡಾ ಪಟುಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡಲಾಗುತ್ತಿದ್ದು, ಅರ್ಹ ಕ್ರೀಡಾ ಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂ. 20 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅಜ್ಜರಕಾಡು […]
ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯ ಕ್ರೀಡಾಕೂಟಕ್ಕೆ ಚಾಲನೆ
ನಿಟ್ಟೆ: ವಿದ್ಯಾರ್ಥಿದೆಸೆಯಲ್ಲಿ ಕ್ರೀಡೆಗೆ ಉತ್ತಮ ಪ್ರೋತ್ಸಾಹ ಸಿಕ್ಕರಷ್ಟೇ ಭವಿಷ್ಯದಲ್ಲಿ ಉತ್ತಮ ಕ್ರೀಡಾಪಟುವಾಗಲು ಸಾಧ್ಯ. ಕ್ರೀಡೆಯೆಂಬುದು ಸ್ನೇಹಕ್ಕಾಗಿ ಹಾಗೂ ವಿನೋದಕ್ಕಾಗಿಯೂ ಆಡಬಹುದು ಎಂಬುದನ್ನು ಮನಸ್ಸಿನಲ್ಲಿ ಇಟ್ಟುಕೊಂಡರೆ ನಿರಾಸೆಯೆಂಬ ಅಂಶ ನಮ್ಮೊಳಗೆ ಸೇರುವುದಿಲ್ಲ ಎಂದು ಮಂಗಳೂರು ವಿಶ್ವವಿದ್ಯಾಲಯದ ಕ್ರಿಕೆಟ್ ತಂಡದ ಮಾಜಿ ಕ್ಯಾಪ್ಟನ್, ವಿಜಯ ಆಳ್ವ ಅಭಿಪ್ರಾಯಪಟ್ಟರು. ಗುರುವಾರದಂದು ಎನ್.ಇ.ಟಿ ಕ್ಯಾಂಪಸ್ನ ಬಿ.ಸಿ.ಆಳ್ವಾ ಕ್ರೀಡಾ ಸಂಕೀರ್ಣದಲ್ಲಿ ನಡೆದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ 36 ನೇ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸ್ಪರ್ಧೆ ಅಂದಮೇಲೆ […]
2019 ವಿಶ್ವಕಪ್: ನ್ಯೂಜಿಲೆಂಡ್- ಇಂಗ್ಲೆಂಡ್ ಫೈನಲ್ ಕದನ, ವಿಶ್ವಕಪ್ ನಿಂದ ಹೊರಬಿದ್ದ ಬಲಿಷ್ಠ ತಂಡಗಳು
ಬರ್ಮಿಂಗ್ಹ್ಯಾಂ: 2019ರ ವಿಶ್ವಕಪ್ ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಅಚ್ಚರಿಯ ಫಲಿತಾಂಶದಿಂದ ಹೊರಬಿದ್ದ ಬೆನ್ನಲ್ಲೇ ಗುರುವಾರದ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ದ ಬಲಿಷ್ಠ ಆಸ್ಟ್ರೇಲಿಯಾ ತಂಡವೂ ಹೊರಬಿದ್ದಿದೆ. ಆ ಮೂಲಕ ಲೀಗ್ ಹಂತದ ಪಂದ್ಯಗಳಲ್ಲಿ ಅದ್ಬುತ ಪ್ರದರ್ಶನ ನೀಡಿ ಪಾಯಿಂಟ್ ಟೇಬಲ್ ನಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸಿದ್ದ, 2011ರ ವಿಶ್ವಕಪ್ ಚ್ಯಾಂಪಿಯನ್ ಭಾರತ ಹಾಗೂ 2015 ಚ್ಯಾಂಪಿಯನ್ ಆಸ್ಟ್ರೇಲಿಯಾ ತಂಡಗಳ ವಿಶ್ವಕಪ್ ಆಸೆ ಕಮರಿಹೋಗಿದೆ. ಹೀಗಾಗಿ ಲೀಗ್ ಹಂತದಲ್ಲಿ ಸಾಧಾರಣ ಪ್ರದರ್ಶನ […]
ರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ಚಾಲನೆ, ಕ್ರೀಡೆಯಲ್ಲಿ ಸಾಕಷ್ಟು ಅವಕಾಶ: ರವೀಂದ್ರ ರೈ
ಉಡುಪಿ: ಕ್ರೀಡೆಯಲ್ಲಿ ಸಾಕಷ್ಟು ಅವಕಾಶಗಳಿದ್ದು, ಮಕ್ಕಳು ಆಸಕ್ತಿ ತೋರಿಸುವ ಕ್ಷೇತ್ರಗಳಿಗೆ ಪೋಷಕರು ಪ್ರೋತ್ಸಾಹ ನೀಡಬೇಕು. ಇದರಿಂದ ಮಕ್ಕಳು ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಬ್ಯಾಂಕ್ ಆಫ್- ಬರೋಡಾದ ಪ್ರಾದೇಶಿಕ ಪ್ರಬಂಧಕ ರವೀಂದ್ರ ರೈ ಹೇಳಿದರು. ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಶನ್ ವತಿಯಿಂದ ಬ್ಯಾಂಕ್ ಆ- ಬರೋಡ ಸಹ ಪ್ರಾಯೋಜಕತ್ವದಲ್ಲಿ ೧೩ವರ್ಷ ವಯೋಮಿತಿಯೊಳಗಿನ ಬಾಲಕ ಮತ್ತು ಬಾಲಕಿಯರಿಗೆ ಏರ್ಪಡಿಸಲಾದ ಆರು ದಿನಗಳ ಅಖಿಲ ಭಾರತ ಸಬ್ ಜ್ಯೂನಿಯರ್ ರ್ಯಾಂಕಿಂಗ್ ರಾಷ್ಟ್ರೀಯ ಬ್ಯಾಡ್ಮಿಂಟನ್ ಟೂರ್ನಮೆಂಟ್ಗೆ ಮಂಗಳವಾರ ಮಣಿಪಾಲದ ಮರಿನಾ ಕ್ರೀಡಾಂಗಣದಲ್ಲಿ ಚಾಲನೆ […]