ಸಾಧನೆ ಮಾಡಿದ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕ ಮರುಪಾವತಿ

ಉಡುಪಿ, ಮೇ 27: 2018-19 ನೇ ಸಾಲಿನ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸುವ ಯೋಜನೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೇಂದ್ರ, ರಾಜ್ಯ ಸರ್ಕಾರಿ ಮತ್ತು ಅನುದಾನಿತ ಶಾಲಾ/ ಕಾಲೇಜುಗಳ ಕ್ರೀಡಾ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅಂತರರಾಷ್ಟ್ರ ಹಾಗೂ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಚಿನ್ನ, ಬೆಳ್ಳಿ ಕಂಚಿನ ಪದಕ ವಿಜೇತರಾದವರು ಹಾಗೂ ವಿಕಲಚೇತನ ಕ್ರೀಡಾಪಟುಗಳು ಕೂಡಾ ಈ ಯೋಜನೆಗೆ ಅರ್ಹರಾಗಿರುತ್ತಾರೆ. ಅರ್ಹ ಅಭ್ಯರ್ಥಿಗಳು ಕಚೇರಿಯವೆಬ್‍ಸೈಟ್  http://serviceonline.gov.in/Karnataka  ಮೂಲಕ […]

ಮಕ್ಕಳ ಆರೋಗ್ಯ ಸದೃಢತೆಗೆ ಕಬಡ್ಡಿ ಪೂರಕ: ಅದಮಾರು ಶ್ರೀ

ಉಡುಪಿ: ಕಬಡ್ಡಿಯಿಂದ ಮಕ್ಕಳ ಏಕಾಗೃತೆ ವೃದ್ಧಿಯಾಗುವುದರ ಜತೆಗೆ ಅವರ ಮಾನಸಿಕ ಹಾಗೂ ದೈಹಿಕ ಆರೋಗ್ಯ ಕೂಡ ಸದೃಢಗೊಳ್ಳುತ್ತದೆ ಎಂದು ಅದಮಾರು ಮಠದ ವಿಶ್ವಪ್ರಿಯ ಸ್ವಾಮೀಜಿ ಹೇಳಿದರು. ಉಡುಪಿ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಆಶ್ರಯದಲ್ಲಿ ಕಾಲೇಜಿನ ಮೈದಾನದಲ್ಲಿ ಬುಧವಾರ ಏರ್ಪಡಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಅಂತರ ಕಾಲೇಜು ಮಟ್ಟದ ಪುರುಷರ ಆಹ್ವಾನಿತ ತಂಡಗಳ ಹೊನಲು ಬೆಳಕಿನ ಕಬಡ್ಡಿ ಪಂದ್ಯಕೂಟ ಶ್ರೀ ಪ್ರಜ್ಞಾ ಟ್ರೋಫಿ—2019 ಕ್ಕೆ ಚಾಲನೆ ನೀಡಿ ಮಾತನಾಡಿದರು. ಮನುಷ್ಯರ ಆರೋಗ್ಯ ಚೆನ್ನಾಗಿರಬೇಕಾದರೆ ಮಣ್ಣಿನ ಸಂಪರ್ಕ ಕೂಡ ಇರಬೇಕೆಂದು ಹಿರಿಯರು […]

ಮಂಗಳೂರು ವಿ.ವಿ. ಮಟ್ಟದ ಅಂತರ್ ಕಾಲೇಜು ಹ್ಯಾಂಡ್ ಬಾಲ್ ಟೂರ್ನ್ ಮೆಂಟ್: ಸೈಂಟ್ ಅಲೋಶಿಯಸ್, ಎಸ್ ಡಿಎಂ ಕಾಲೇಜಿನ ತಂಡಕ್ಕೆ ಸಮಗ್ರ ಪ್ರಶಸ್ತಿ

ಉಡುಪಿ: ಉಡುಪಿ ಪೂರ್ಣಪ್ರಜ್ಞ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಹಾಗೂ ಮಂಗಳೂರು ವಿಶ್ವವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಪಿಪಿಸಿ ಮೈದಾನದಲ್ಲಿ ನಡೆದ ಎರಡು ದಿನಗಳ ಮಂಗಳೂರು ವಿ.ವಿ. ಮಟ್ಟದ ಅಂತರ್ ಕಾಲೇಜು ಪುರುಷರ ಹಾಗೂ ಮಹಿಳೆಯರ ಹ್ಯಾಂಡ್ ಬಾಲ್ ಪಂದ್ಯಕೂಟದಲ್ಲಿ ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನ ಮಹಿಳಾ ತಂಡ ಹಾಗೂ ಉಜಿರೆ ಎಸ್ ಡಿಎಂ ಕಾಲೇಜಿನ ಪುರುಷರ ತಂಡ ಪ್ರಥಮ ಬಹುಮಾನ ಗೆದ್ದುಗೊಂಡಿವೆ. ಫೈನಲ್ ಪಂದ್ಯದಲ್ಲಿ ಅಲೋಶಿಯಸ್ ಕಾಲೇಜಿನ ಮಹಿಳಾ ತಂಡ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ತಂಡವನ್ನು14-09 ಅಂಕಗಳ […]

ಹಿರಿಯಡ್ಕ ಪ್ರ.ದರ್ಜೆ ಕಾಲೇಜು: ಜ.27 ರಂದು ಕ್ರೀಡಾಕೂಟ

ಉಡುಪಿ: ಹಿರಿಯಡ್ಕ ಪ್ರ.ದರ್ಜೆ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ದಶಮಾನೋತ್ಸವದ ಪ್ರಯುಕ್ತ ಹಿರಿಯ ವಿದ್ಯಾರ್ಥಿಗಳ ಕ್ರೀಡಾಕೂಟವನ್ನು ಜ. 27 ರಂದು  ನಡೆಯಲಿದೆ. ಪೂರ್ವಾಹ್ನ 9.30ಕ್ಕೆ ಕಾಲೇಜಿನ ಪ್ರಾಂಶುಪಾಲರಾದ ಡಾl ನಿಕೇತನ ಇವರು  ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ. ಕಾಲೇಜಿನ ಕ್ರೀಡಾಂಗಣದಲ್ಲಿ ಕೂಟ ನಡೆಯಲಿದೆ. ಕಾಲೇಜಿನ ಹಳೆ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಕ್ರಿಕೆಟ್, ವಾಲಿಬಾಲ್, ತ್ರೋಬಾಲ್, 100ಮೀ ಓಟ, ರಿಲೆ ಹಾಗೂ ಇನ್ನಿತರ ಸ್ಪರ್ಧೆಗಳು ನಡೆಯಲಿದೆ, ಹಿರಿಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಕ್ರೀಡಾಕೂಟದಲ್ಲಿ ಭಾಗವಹಿಸುವಂತೆ ಪ್ರಕಟನೆ ತಿಳಿಸಿದೆ.