ಶಾಲಾ ಮಕ್ಕಳಿಗೆ ಫೋಸ್ಕೋ ಕಾಯಿದೆ ಕುರಿತು ಅರಿವು ಮೂಡಿಸಲಾಗುವುದು: ಫೋನ್ ಇನ್ ಕಾರ್ಯಕ್ರಮದಲ್ಲಿ ಎಸ್.ಪಿ ಭರವಸೆ

ಉಡುಪಿ: ಶಾಲಾ ಮಕ್ಕಳಿಗೆ ಫೋಕ್ಸೊ ಕಾಯ್ದೆಯ ಬಗ್ಗೆ ಅರಿವು ಮೂಡಿಸುವ ಸಲುವಾಗಿ ವಿಶೇಷ ಕಾರ್ಯಾಗಾರವನ್ನು ಆಯೋಜಿಸಲು ಚಿಂತನೆ ನಡೆಯುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಹೇಳಿದರು. ಶುಕ್ರವಾರ ಉಡುಪಿ ಎಸ್ಪಿ ಕಚೇರಿಯಲ್ಲಿ ನಡೆದ ಫೋನ್ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರೊಬ್ಬರ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.  ಶಾಲಾ ವಿದ್ಯಾರ್ಥಿಗಳಿಗೆ ಫೋಕ್ಸೊ ಕಾಯ್ದೆಯ ಬಗ್ಗೆ ಮೊದಲೇ ಜಾಗೃತಿ, ತಿಳುವಳಿಕೆ ನೀಡಬೇಕು, 6ನೇ ತರಗತಿಯಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಪೊಲೀಸ್ ಇಲಾಖೆ ವತಿಯಿಂದ ತಿಳುವಳಿಕೆ ಮೂಡಿಸುವ ಕಾರ್ಯಕ್ರಮವನ್ನು ಆಯೋಜಿಸಿದರೆ ಉತ್ತಮ  ಎಂದು […]