ಯುವತಿಯರರು ಸ್ಕ್ವಾಷ್ ಕ್ರೀಡೆಗೆ ಆಸಕ್ತಿ‌ ತೋರುವುದು ಉತ್ತಮ ಬೆಳವಣಿಗೆ: ರವಿದೀಕ್ಷಿತ್ 

ಉಡುಪಿ: ಪ್ರಸ್ತುತ ದಿನಗಳಲ್ಲಿ ಯುವತಿಯರು ಸ್ಕ್ವಾಷ್‌ ಕ್ರೀಡೆಯ ಬಗ್ಗೆ ಹೆಚ್ಚಿನ ಆಸಕ್ತಿ ತೋರಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದು ಅಂತರರಾಷ್ಟ್ರೀಯ ಸ್ಕ್ವಾಷ್‌ ಆಟಗಾರ ರವಿದೀಕ್ಷಿತ್‌ ಹೇಳಿದರು. ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ (ಮಾಹೆ)ಯ ವತಿಯಿಂದ ಮಣಿಪಾಲದ ಮರೀನಾ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ ಮೂರು ದಿನಗಳ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಮಟ್ಟದ ಮಹಿಳಾ ಸ್ಕ್ವಾಷ್‌ ಚಾಂಪಿಯನ್‌ಶಿಪ್‌ ಟೂರ್ನಮೆಂಟ್‌ ಅನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು. ಯುವತಿಯರು ಕಾಲೇಜು ವಿದ್ಯಾಭ್ಯಾಸದವರೆಗೆ ಮಾತ್ರ ಸ್ಕ್ವಾಷ್‌ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿದ್ದು, ಕಾಲೇಜು ಶಿಕ್ಷಣ ಮುಗಿದ ಬಳಿಕ […]