ಆ.31: ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಶ್ರೀ ಗಣೇಶ ಚತುರ್ಥಿ
ಕುಂದಾಪುರ: ಕುಂದಾಪುರ ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಶ್ರೀ ವಿನಾಯಕ ಚತುರ್ಥಿಯ ಪ್ರಯುಕ್ತ ಆ.31 ರಂದು ಅಷ್ಟೋತ್ತರ ಸಹಸ್ರ ನಾಲಿಕೇರ ಗಣಪತಿ ಯಾಗ ಜರಗಲಿದೆ. ಆ.30 ಮತ್ತು 31 ರಂದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ದೇಗುಲದ ಆಡಳಿತ ಧರ್ಮದರ್ಶಿ ಕೆ. ಶ್ರೀರಮಣ ಉಪಾಧ್ಯಾಯ ಹಾಗೂ ಹಿರಿಯ ಧರ್ಮದರ್ಶಿ ಕೆ. ಸೂರ್ಯನಾರಾಯಣ ಉಪಾಧ್ಯಾಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.