ಉಡುಪಿ ಶ್ರೀ ಕೃಷ್ಣಮಠದಲ್ಲಿ 15 ದಿನಗಳ ನಂತರ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ
ಉಡುಪಿ: ಈಗಾಗಲೇ ರಾಜ್ಯದ ಇತರೆ ದೇವಾಲಯಗಳಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಿದ್ದರೂ, ಉಡುಪಿ ಶ್ರೀ ಕೃಷ್ಣಮಠದಲ್ಲಿ 10-15 ದಿನಗಳ ನಂತರ ಕೊರೊನಾ ಪರಿಣಾಮ ಗಮನಿಸಿ, ಇತರ ಮಠಾಧೀಶರ ಸಲಹೆ-ಸೂಚನೆಗಳನ್ನು ಅನುಸರಿಸಿ ಮುಕ್ತವಾಗಿ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಅದಮಾರು ಮಠದ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಹಾಗೂ ಈಶಪ್ರಿಯ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ. ಶ್ರೀ ಕೃಷ್ಣಭಕ್ತರಿಗೆ ಹೊರಗಿನಿಂದಲೇ ದರ್ಶನ ವ್ಯವಸ್ಥೆ: ಕೊರೊನಾ ಸೋಂಕು ಹಿನ್ನಲೆ ದೇಶಾದ್ಯಂತ ಲಾಕ್ ಡೌನ್ ಜಾರಿಗೊಲಿಸಿದ್ದು, ಭಕ್ತರಿಗೆ ಮಠದ ಒಳಗೆ ಪ್ರವೇಶ […]