ಶರಣರ ಜೀವನ ಶೈಲಿಯನ್ನು ಪ್ರತಿಯೊಬ್ಬರೂ ಅನುಸರಿಸಿ: ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್
ಉಡುಪಿ: 12 ನೇ ಶತಮಾನದಲ್ಲಿ ಬಸವಣ್ಣನವರವ್ಯಕ್ತಿತ್ವ ಹಾಗೂ ವಚನಗಳಿಂದ ಪ್ರಭಾವಿತರಾಗಿ ಅವರೊಂದಿಗೆ ಇದ್ದು, ತಮ್ಮ ಕಾಯಕ ನಿಷ್ಠೆಯಿಂದ ವಚನಗಳನ್ನು ರಚಿಸಿ, ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೆಲಸ ಮಾಡಿದ್ದಾರೆ.ಇಂತಹ ಶರಣರ ಜೀವನ ಶೈಲಿಯನ್ನು ಪ್ರತಿಯೊಬ್ಬರೂಅನುಸರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಹೇಳಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ನಡೆದ ಶ್ರೀ ನುಲಿಯ ಚಂದಯ್ಯ ಜಯಂತಿ […]